ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪೊನ್ನಂಪೇಟೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪೊನ್ನಂಪೇಟೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಪಟ್ಟಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. ಮುಂದಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ತಾಲೂಕು ಕಾರ್ಯದರ್ಶಿ ಕೋಟೇರ ಕಿಶನ್ ಉತ್ತಪ್ಪ, ವಿರಾಜಪೇಟೆ ಮಂಡಲ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಆಲೇಮಾಡ ಸುದೀಪ್, ಪ್ರಮುಖರಾದ ಚಿರಿಯಪಂಡ ರಾಜಾ ನಂಜಪ್ಪ, ಚಿಂಡಮಾಡ ರಕ್ಷಿತ್, ಮೂಕಳೇರ ಲಕ್ಷ್ಮಣ್ ಮೂಕಳೇರ ರಮೇಶ್, ಅಡ್ಡಂಡ ಪ್ರಕಾಶ್, ಎಸ್‌ಸಿ ಮೋರ್ಚಾದ ರಮೇಶ್, ಮಧು, ಕೊಟ್ಟಂಗಡ ಸಜನ್ ಪೂವಣ್ಣ, ರೇಖಾ ಶ್ರೀಧರ್, ಗಾಂಡಂಗಡ ಕೌಶಿಕ್ ದೇವಯ್ಯ, ಕೋಳೇರ ರಾಜ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.