ಮೋದಿ ಜನ್ಮದಿನದ ನಿಮಿತ್ತ ಪೂಜೆ, ಸಿಹಿ ವಿತರಣೆ

KannadaprabhaNewsNetwork |  
Published : Sep 18, 2026, 02:00 AM IST
ಹಾವೇರಿ ಶಹರ ಬಿಜೆಪಿ ಘಟಕದಿಂದ ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನದ ಪ್ರಯುಕ್ತ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜಾರ್ಚನೆ ನಡೆಸಲಾಯಿತು. | Kannada Prabha

ಸಾರಾಂಶ

ಹಾವೇರಿ ಶಹರ ಬಿಜೆಪಿ ಘಟಕದಿಂದ ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನದ ಪ್ರಯುಕ್ತ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜಾರ್ಚನೆ ನಡೆಸಲಾಯಿತು.

ಹಾವೇರಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನದ ಪ್ರಯುಕ್ತ ಹಾವೇರಿ ಶಹರ ಬಿಜೆಪಿ ಘಟಕ ಹಾಗೂ ಗ್ರಾಮೀಣ ಘಟಕದ ವತಿಯಿಂದ ವಿವಿಧೆಡೆ ದೇವರಿಗೆ ಪೂಜಾರ್ಚನೆ, ಬುದ್ಧಿಮಾಂದ್ಯ ಮಕ್ಕಳಿಗೆ ಹಾಗೂ ವಯೋವೃದ್ಧರಿಗೆ ಸಿಹಿ ವಿತರಣೆ ಹೀಗೆ ಹಲವು ಕಾರ್ಯಕ್ರಮಗಳು ನಡೆದವು.

ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಹಾಗೂ ರಾಣಿಬೆನ್ನೂರ ತಾಲೂಕು ದೇವರಗುಡ್ಡದ ಮಾಲತೇಶ ಸ್ವಾಮಿಗೆ ಪೂಜೆ, ಅಭಿಷೇಕ ನೆರವೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಆರೋಗ್ಯವನ್ನು ಕೊಟ್ಟು ಕಾಪಾಡಲಿ ಎಂದು ಅರ್ಚನೆಯನ್ನು ಮಾಡಿಸಲಾಯಿತು. ಹಾವೇರಿಯ ಬೂತ್ ನಂ.219ರ ವೃದ್ಧಾಶ್ರಮದಲ್ಲಿ, ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಕೇಕ್ ಕತ್ತರಿಸಿ ಸಿಹಿ ವಿತರಿಸುವ ಮೂಲಕ ಜನ್ಮ ದಿನವನ್ನು ಆಚರಿಸಲಾಯಿತು.

ಈ ವೇಳೆ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ ನಾರಾಯಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೀಲಪ್ಪ ಚಾವಡಿ, ಶಹರ ಅಧ್ಯಕ್ಷ ಕಿರಣ್ ಕೊಳ್ಳಿ, ಗ್ರಾಮೀಣ ಅಧ್ಯಕ್ಷ ಮಾರುತಿ ಗೊರವರ, ಜಿಲ್ಲಾ ವಕ್ತಾರ ನಿರಂಜನ ಹೇರೂರ, ವಿಜಯಕುಮಾರ ಚಿನ್ನಿಕಟ್ಟಿ, ರೋಹಿಣಿ ಪಾಟೀಲ, ಲತಾ ಬಡ್ನಿಮಠ, ಮಂಜುಳಾ ಕರಬಸಮ್ಮನವರ, ಅನುಪಮಾ ವಾಲಿಶೆಟ್ಟರ, ಭರಮಪ್ಪ ಉರ್ಮಿ, ಪ್ರಕಾಶ ಬಳ್ಳಾರಿ, ನಾಗರಾಜ ಹರಿಗೋಲ, ಹನುಮಂತಪ್ಪ ದಾಸರ ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ನಗರ ಮಂಡಲದ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಹಾಗೂ ಅನೇಕ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣದಲ್ಲಿಯೇ ಪ್ರಥಮ ಹಂತದ ಚಿಕಿತ್ಸೆ ದೊರೆಯಬೇಕು: ಬೊಮ್ಮಾಯಿ
ಹಾನಗಲ್ಲ ತಾಲೂಕು ಬರ ಘೋಷಣೆ ನೆಪಕ್ಕೆ ಮಾತ್ರ, ಪೂರ್ಣ ಬರ ಘೋಷಿಸಬೇಕು