ಗಂಗಾವತಿಯಲ್ಲಿ ವಸತಿ ನಿಲಯ ಅವ್ಯವಸ್ಥೆ: ತಾಪಂಗೆ ಮುತ್ತಿಗೆ

KannadaprabhaNewsNetwork |  
Published : Sep 21, 2026, 02:15 AM IST
ಗಂಗಾವತಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ ಎಸ್‌ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಾಪಂಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. | Kannada Prabha

ಸಾರಾಂಶ

ಗಂಗಾವತಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ ಖಂಡಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಾಪಂಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಗಂಗಾವತಿ: ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ ಖಂಡಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಾಪಂಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಈ ವೇಳೆ ಮಾತನಾಡಿದ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳೂ ದೊರೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಟ್ಟು ವಿದ್ಯಾರ್ಥಿಗಳಿಗೆ ಕೇವಲ ಮೂರು ಶೌಚಾಲಯಗಳಿವೆ, ಕುಡಿಯುವ ನೀರಿನ ಸಮಸ್ಯೆ ಇದೆ, ನೀರನ್ನು ಸಮರ್ಪಕವಾಗಿ ಶುದ್ಧೀಕರಿಸಲಾಗುತ್ತಿಲ್ಲ. ನೀರಿನಲ್ಲಿ ಹುಳು, ಪಾಚಿ ಕಾಣಿಸಿಕೊಳ್ಳುತ್ತಿವೆ, ಇಂತಹ ಗಂಭೀರ ಸಮಸ್ಯೆ ಇದ್ದರೂ ಅಧಿಕಾರಿಗಳು ಮೌನ ವಹಿಸಿರುವುದು ಖಂಡನೀಯ ಎಂದು ಹೇಳಿದರು.

ವಸತಿ ನಿಲಯದಲ್ಲಿ ಸುಸಜ್ಜಿತ ಗ್ರಂಥಾಲಯ, ಪಠ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳು ಮತ್ತು ದಿನಪತ್ರಿಕೆಗಳ ಕೊರತೆ ಇದೆ. ಮೆನು ಚಾರ್ಟ್ ಪ್ರಕಾರ ಆಹಾರ ನೀಡುತ್ತಿಲ್ಲ. ಶುಚಿ ಸಂಭ್ರಮ ಕಿಟ್ ನೀಡುತ್ತಿಲ್ಲ. ಊಟದಲ್ಲಿ ಹುಳು, ಕಸ, ಕಡ್ಡಿ ಕಂಡುಬರುತ್ತಿವೆ. ಕಟ್ಟಡದ ಅಸ್ವಚ್ಛತೆ ಹಾಗೂ ಕ್ರೀಡಾ ಸಾಮಗ್ರಿಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ ಎಂದು ಆರೋಪಿಸಿದರು.

ಅಡುಗೆ ಸಿಬ್ಬಂದಿ ಹಾಗೂ ನಿಲಯ ಪಾಲಕರು ವಿದ್ಯಾರ್ಥಿನಿಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಮಸ್ಯೆ ಪ್ರಶ್ನಿಸಿದ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ವಸತಿ ನಿಲಯದಿಂದ ಹೊರಹಾಕುವ ಬೆದರಿಕೆ ಹಾಕುತ್ತಾರೆ. ಪೋಷಕರಿಗೂ ವಸತಿ ನಿಲಯದೊಳಗೆ ಪ್ರವೇಶ ನೀಡದಿರುವ ಆರೋಪಗಳಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಂದು ಆಗ್ರಹಿಸಿದರು.

ತಾಲೂಕು ಅಧ್ಯಕ್ಷ ನಾಗರಾಜು ಯು. ಮಾತನಾಡಿ, ಈ ಸಮಸ್ಯೆಗಳನ್ನು ಈಗಾಗಲೇ ನಿಲಯ ಪಾಲಕರು, ತಾಲೂಕು ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ. ಕೂಡಲೇ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಮಧ್ಯಪ್ರವೇಶಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಹಾಗೂ ನಿರ್ಲಕ್ಷ್ಯ ತೋರಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಅನಿರ್ದಿಷ್ಟ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಉಪಾಧ್ಯಕ್ಷ ಶರೀಫ್ ಎಂ., ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಹೋಸ್ಕೆರ, ಮುಖಂಡರಾದ ಮಾರುತಿ ವಿಠಲಪುರ, ವೆಂಕಟೇಶ್ ಹಾಗೂ ವಿದ್ಯಾರ್ಥಿನಿಯರಾದ ರಾಧಿಕಾ, ಲಕ್ಷ್ಮೀ, ಅಕ್ಷತಾ, ಭವಾನಿ, ಐಶ್ವರ್ಯಾ, ಅಂಬಿಕಾ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರು ಸಮಾಜಕ್ಕೆ ದಿಕ್ಸೂಚಿಯಾಗಲಿ
ಮಳೆ ಇಲ್ಲ, ಬೆಳೆ ಇಲ್ಲ ಸರ್ಕಾರಕ್ಕೆ ಆದಾಯ ಕಡಿಮೆ ಇದೆ: ರಾಯರಡ್ಡಿ