ಕನ್ನಡಪ್ರಭ ವಾರ್ತೆ ಶಹಾಪುರ
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ತಾಲೂಕಿನ ದೋರನಹಳ್ಳಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ 200ಕ್ಕೂ ಹೆಚ್ಚು ಮಕ್ಕಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಶುರುವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿದ್ಯಾರ್ಥಿಗಳು ಸೇವಿಸಿರುವ ಆಹಾರವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಮಕ್ಕಳ ಅಸ್ವಸ್ಥತೆಗೆ ಕಾರಣವಾದ ಆಹಾರ ಬದಲಿಗೆ ಬೇರೆ ಆಹಾರ ಪರೀಕ್ಷೆಗೆ ಒಳಪಡಿಸಿ, ಈ ಪ್ರಕರಣವನ್ನು ಮುಚ್ಚಿ ಹಾಕುವ ಅನುಮಾನವಿದೆ ಎಂದು ಅವರು ಆರೋಪಿಸಿದರು.
ನಗರದ ನಿರ್ಮಲಾದೇವಿ ಮಹಿಳಾ ಸಂಘದ ವತಿಯಿಂದ ತಾಲೂಕಿನ 13 ಶಾಲೆಗಳಿಗೆ ಬಿಸಿಯೂಟ ಪೂರೈಸಲಾಗುತ್ತಿದೆ. ಈ ಘಟನೆ ನಡೆಯಲು ಗುತ್ತಿಗೆದಾರರ ನಿರ್ಲಕ್ಷ್ಯ ಕಾರಣವೆಂದು ದೂರಿದರು.ಬಡ ಮಕ್ಕಳ ಜೀವದ ಜೊತೆ ಆಟವಾಡಿದ ಏಜೆನ್ಸಿಯ ವಿರುದ್ಧ ಕ್ರಮ ಜರುಗಿಸದೆ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಧಿಕಾರಿಗಳು ಸತ್ಯವನ್ನು ಮರೆಮಾಚುವ ಪ್ರಯತ್ನವೇನಾದರೂ ಮಾಡಿದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.