ಪಿಟಿಸಿಎಲ್‌ ಕಾಯ್ದೆ ಕಳಪೆ ಜಾರಿ: ಗೋಪಾಲಗೌಡ

KannadaprabhaNewsNetwork |  
Published : Jun 08, 2026, 04:15 AM IST
Gandhi Bhavan 4 | Kannada Prabha

ಸಾರಾಂಶ

ಪಿಟಿಸಿಎಲ್ ಕಾಯ್ದೆ ಅನುಷ್ಠಾನದ ಸಮಸ್ಯೆಗಳ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ನಿವೃತ್ತ ಐಎಎಸ್ ಅಧಿಕಾರಿಗಳಾದ ತಂಗರಾಜ್, ಡಾ.ಎಸ್.ಎಂ.ಜಾಮದಾರ್‌ ಮತ್ತಿತರರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲವು ಜಮೀನುಗಳ ಪರಭಾರೆ) ನಿಷೇಧ ಕಾಯ್ದೆ-1978 ಅನ್ನು ಸಾಂವಿಧಾನಿಕ ಗುರಿಗಳನ್ನು ಸಾಧಿಸಲು ಜಾರಿಗೆ ತರಲಾಗಿದ್ದರೂ, ಕಳಪೆ ಅನುಷ್ಠಾನದಿಂದಾಗಿ ಕಾಯ್ದೆಯ ಉದ್ದೇಶವೇ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಬೇಸರ ವ್ಯಕ್ತಪಡಿಸಿದರು.

‘ಪಿಟಿಸಿಎಲ್ ಕಾಯ್ದೆ-1978ರ ಅನುಷ್ಠಾನದಲ್ಲಿನ ಸಮಸ್ಯೆಗಳು’ ಕುರಿತು ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಾರ್ವಜನಿಕ ಅಹವಾಲು ಕಾರ್ಯಕ್ರಮದಲ್ಲಿ ಮಾತನಾಡಿ, ಸಂವಿಧಾನವು ನಮಗೆ ಜೀವಿಸುವ ಹಕ್ಕನ್ನು ನೀಡಿದೆ. ಈ ಹಕ್ಕನ್ನು ಅರ್ಥಪೂರ್ಣವಾಗಿ ಜಾರಿಗೊಳಿಸಲು ಆರ್ಥಿಕ ಸ್ವಾತಂತ್ರ್ಯ ಅತ್ಯಗತ್ಯವಾಗಿದೆ. ಇಂತಹ ಸ್ವಾತಂತ್ರ್ಯವನ್ನು ಭದ್ರಪಡಿಸಿಕೊಳ್ಳಲು ಭೂಮಿಯ ಲಭ್ಯತೆ ಮುಖ್ಯವಾಗಿದೆ. ಆದರೆ ಕಳಪೆ ಅನುಷ್ಠಾನದಿಂದಾಗಿ ಕಾಯ್ದೆಯ ಉದ್ದೇಶವೇ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಸಮಾಜದ ಕಟ್ಟಕಡೆಯ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಸರ್ಕಾರ ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕು. ಪಿಟಿಸಿಎಲ್‌ ಕಾಯ್ದೆಯ ಬಗ್ಗೆ ವಿಧಾನ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕುಎಂದು ತಿಳಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ಡಾ.ಎಸ್.ಎಂ.ಜಾಮದಾರ್‌ ಮಾತನಾಡಿ, ಪಿಟಿಸಿಎಲ್ ಕಾಯ್ದೆ ನಮ್ಮ ಸುತ್ತಲಿರುವ ಸಾಮಾಜಿಕ ಅಸಮಾನತೆಗಳನ್ನು ಪ್ರತಿಬಿಂಬಿಸುವ ಕನ್ನಡಿಯಾಗಿದೆ. ಆದ್ದರಿಂದ ನ್ಯಾಯಕ್ಕಾಗಿ ಜಿಲ್ಲೆ ಜಿಲ್ಲೆಯಲ್ಲೂ ಹೋರಾಟ ನಡೆಸಬೇಕಿದೆ ಎಂದು ಕರೆ ನೀಡಿದರು.

ನಿವೃತ್ತ ಐಎಎಸ್ ಅಧಿಕಾರಿ ತಂಗರಾಜ್, ಸಾಮಾಜಿಕ ಕಾರ್ಯಕರ್ತೆ ಜ್ಯೋತಿರಾಜ್, ವಕೀಲ ಎಚ್.ಎಲ್.ವೆಂಕಟೇಶ್, ಮುಖಂಡರಾದ ಬಸವರಾಜ ಕೌತಾಳ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಧಾನಮಂತ್ರಿ ಸೂರ್ಯ ಘರ್‌ ಯೋಜನೆ ಮಾಹಿತಿ ಕಾರ್ಯಕ್ರಮ
ಒಟ್ಟಾಗದ ಹೊರತು ಪ್ರತ್ಯೇಕ ಧರ್ಮದ ಸ್ಥಾನಮಾನ ಕಷ್ಟ: ಪ್ರೊ. ಸಂಜಯಕುಮಾರ