ಕನ್ನಡಪ್ರಭ ವಾರ್ತೆ ಹಾಸನ
ಕಳಪೆ ಬೀಜವನ್ನು ಕೃಷಿ ಇಲಾಖೆಯವರ ಹೆಸರು ಬಳಸಿಕೊಂಡು ಪ್ರಚಾರದಲ್ಲಿ ತೊಡಗಿರುವರ ವಿರುದ್ಧ ಮೊಕದ್ದಮೆ ದಾಖಲಿಸಿ ಮತ್ತು ಕೃಷಿ ಇಲಾಖೆಗೆ ಸರಬರಾಜು ಮಾಡದೆ ಇರುವ ಕಂಪನಿಯವರನ್ನು ಅಂಗಡಿ ಮುಖಾಂತರ ಮಾರುವುದನ್ನು ನಿರ್ಬಂಧಿಸಬೇಕು. ಬೆಳೆ ಸಮೀಕ್ಷೆಯನ್ನು ತಾಲೂಕು ಆಡಳಿತ ಅಧಿಕಾರಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜೊತೆಗೂಡಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಸಮೀಕ್ಷೆ ನಡೆಸಿ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು. ಬೆಳೆ ನಾಶವಾಗಿರುವ ರೈತರಿಗೆ ಕಂಪನಿಯವರಿಂದಲೆ ಕೃಷಿ ಇಲಾಖೆಯವರು ಪ್ರತಿ ಎಕರೆಗೆ ೫೦ ಸಾವಿರ ರು.. ಪರಿಹಾರವನ್ನು ಕೊಡಿಸಿಕೊಡಬೇಕು ಹಾಗೂ ಹಾಸನ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಹೆಸರನ್ನು ಅವರ ಅನುಮತಿ ಇಲ್ಲದೆ ಬಳಸಿಕೊಂಡು ಕರಪತ್ರವನ್ನು ಮುದ್ರಿಸಿ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡಿರುವ ಬಿತ್ತನೆ ಬೀಜದ ಹೈಟೆಕ್ ಕಂಪನಿ ಮತ್ತು ಏಜೆನ್ಸಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟದ ಉದ್ದೇಶವನ್ನು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಮರ್ಕುಲಿ ಪ್ರಕಾಶ್, ಹಾಸನ ತಾಲೂಕು ಅಧ್ಯಕ್ಷ ಬಿಟ್ಟಗೌಡನಹಳ್ಳಿ ಮಂಜುನಾಥ್, ಪಾಲಾಕ್ಷ ಮಾರನಹಳ್ಳಿ, ಶಿವಕುಮಾರ್ ಹಳೇಬೀಡು, ಶೇಷಣ್ಣ, ಕಾಂತರಾಜು ಇತರರು ಉಪಸ್ಥಿತರಿದ್ದರು.