ಉಡುಪಿ: ನಗರದ ಅಜ್ಜರಕಾಡು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಆಕರ್ಷಕವಾಗಿ ಪಥಸಂಚಲನ ಸ್ಪರ್ಧೆಯ ಕಾಲೇಜು ವಿಭಾಗದ ಫಲಿತಾಂಶ ಪ್ರಕಟವಾಗಿದೆ. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಎನ್.ಸಿ.ಸಿ ಆರ್ಮಿ ತಂಡ ಪ್ರಥಮ, ಅದೇ ಕಾಲೇಜಿನ ಎನ್.ಸಿ.ಸಿ. ನೇವಿ ತಂಡ ದ್ವಿತೀಯ ಹಾಗೂ ಕುಂಜಿಬೆಟ್ಟು ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜಿನ ಎನ್.ಸಿ.ಸಿ ಆರ್ಮಿ ತಂಡ ತೃತೀಯ ಸ್ಥಾನ ಪಡೆದವು.
ಪ್ರೌಢಶಾಲಾ ವಿಭಾಗದಲ್ಲಿ ವಳಕಾಡು ಸರ್ಕಾರಿ ಪ್ರೌಢಶಾಲೆ ಪ್ರಥಮ, ಆವರ್ಸೆ ಸರ್ಕಾರಿ ಪ್ರೌಢಶಾಲೆ ದ್ವಿತೀಯ ಹಾಗೂ ಮಣಿಪಾಲದ ಮಾಧವಕೃಪಾ ಪ್ರೌಢಶಾಲೆ ತೃತೀಯ ಸ್ಥಾನ ಪಡೆದವು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಒಳಕಾಡು ಸರಕಾರಿ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆಯಿತು.ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂದ್ರಾಳಿಯ ಇಂಗ್ಲೀಷ್ ಮಾಧ್ಯಮ ಹೈಸ್ಕೂಲ್ ಪ್ರಥಮ, ಒಳಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ, ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ತೃತೀಯ ಸ್ಥಾನ ಹಾಗೂ ಆದಿಉಡುಪಿಯ ಇಂಗ್ಲೀಷ್ ಮಾಧ್ಯಮ ಹೈಸ್ಕೂಲ್ ಸಮಾಧಾನಕರ ಬಹುಮಾನ ಪಡೆದವು.ಅಬುಲ್ ಕಲಾಂ ಪ್ರತಿಭಾ ಪುರಸ್ಕಾರ: ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೌಲಾನಾ ಅಬುಲ್ ಕಲಾಂ ಆಜಾಧ್ ಪ್ರತಿಭಾ ಪುರಸ್ಕಾರವನ್ನು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಮಿಷಲ್ ಅಸ್ಸಾದಿ (ಶೇ. 99.20), ರಿಹಾ ಮೆಲಾನಿ ಡಿ ಸೋಜಾ (ಶೇ. 99.20) ಹಾಗೂ ಮದಿಹಾ ಮಸೂದ್ (ಶೇ.98.8) ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಮಹೇರ್ ಮುಸ್ತಾಕ್ ಸಾಹೇಬ (ಶೇ.98.67), ರೀಫಾಥ್ ಫಾತೀಮಾ (ಶೇ. 98.17) ಹಾಗೂ ಗೌಸಿಯಾ ಬೇಗ್ ಅಬ್ದುಲ್ ರಸೀದ್ ಮಿರ್ಜಾನವರ್ (ಶೇ. 98) ರವರಿಗೆ ವಿತರಿಸಲಾಯಿತು.ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಹುಮಾನ ವಿತರಿಸಿದರು. ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಎಸ್ಪಿ ಹರಿರಾಮ್ ಶಂಕರ್, ಜಿಪಂ ಸಿಇಓ ಪ್ರತೀಕ್ ಬಾಯಲ್ ಮುಂತಾದವರಿದ್ದರು.