ಜನಪರ ಯೋಜನೆಗಳೇ ಹೆಚ್ಚು ಲೋಕಸಭಾ ಸದಸ್ಯರು ಆಯ್ಕೆಯಾಗಲು ಸಹಕಾರಿ

ಪಿರಿಯಾಪಟ್ಟಣ ತಾಲೂಕು ಕಿತ್ತೂರು ಸ್ವ ಗ್ರಾಮದಲ್ಲಿ ಶುಕ್ರವಾರ ಕುಟುಂಬ ಸಮೇತವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳು ಪಡೆಯಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಇವರ ಗೆಲುವಿಗೆ ಶ್ರೀರಕ್ಷೆಯಾಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಕಾಂಗ್ರೆಸ್ ಅಭ್ಯರ್ಥಿಗಳ ಹೆಚ್ಚಿನ ಸ್ಥಾನ ಪಡೆಯಲು ಅನುಕೂಲವಾಗಲಿದೆ ಎಂದರು.

KannadaprabhaNewsNetwork | Published : Apr 27, 2024 7:49 PM IST

ಕನ್ನಡಪ್ರಭ ವಾರ್ತೆ ರಾವಂದೂರು

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಹೆಚ್ಚು ಲೋಕಸಭಾ ಸದಸ್ಯರು ಆಯ್ಕೆಯಾಗಲು ಸಹಕಾರಿಯಾಗಲಿದೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದರು.

ಪಿರಿಯಾಪಟ್ಟಣ ತಾಲೂಕು ಕಿತ್ತೂರು ಸ್ವ ಗ್ರಾಮದಲ್ಲಿ ಶುಕ್ರವಾರ ಕುಟುಂಬ ಸಮೇತವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ನಂತರ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳು ಪಡೆಯಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಇವರ ಗೆಲುವಿಗೆ ಶ್ರೀರಕ್ಷೆಯಾಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಕಾಂಗ್ರೆಸ್ ಅಭ್ಯರ್ಥಿಗಳ ಹೆಚ್ಚಿನ ಸ್ಥಾನ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಚಿವರ ಮೊಮ್ಮಗ ತೇಜಸ್ ಕುಮಾರ್ ಅತ್ತಿಗೋಡು ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಿದರು.

ಪತ್ನಿ ಭಾರತಿ ವೆಂಕಟೇಶ್ , ಪುತ್ರ ನಿತಿನ್ ವೆಂಕಟೇಶ್ , ಮೊಮ್ಮಗ ತೇಜಸ್ ಕುಮಾರ್ ಇದ್ದರು.

ಸುನಿಲ್ ಬೋಸ್ ಗೆಲುವು ನಿಶ್ಚಿತ - ಸಿದ್ದರಾಜು ವಿಶ್ವಾಸ

ಕನ್ನಡಪ್ರಭ ವಾರ್ತೆ ಸರಗೂರುಸುನಿಲ್ ಬೋಸ್ ಅವರ ಗೆಲುವು ನಿಶ್ಚಿತ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ದರಾಜು ವಿಶ್ವಾಸ ವ್ಯಕ್ತಪಡಿಸಿದರು.

ದೇವಲಾಪುರ ಗ್ರಾಮದ ಮತಗಟ್ಟೆ 250ರಲ್ಲಿ ಕಾಂಗ್ರೆಸ್ ನಿಂದ ಮಾತ್ರ ಬೂತ್ ಏಜಂಟ್ ಇದ್ದು, ಬೇರೆ ಯಾವ ಪಕ್ಷದಿಂದ ಏಜಂಟ್ ಇಲ್ಲದಿರುವುದು ಕಂಡು ಬಂದಿತು, ದೇವಲಾಪುರ ಹಾಗೂ ದೇವಲಾಪುರ ಕಾಲೋನಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಸ್ವಾಭಿಮಾನಿ ಮತದಾರರು, ತಾಲೂಕಿನ ಶಾಸಕ ಅನಿಲ್ ಚಿಕ್ಕಮಾದು ಅವರ ಆಶಯದಂತೆ ದೇವಲಾಪುರ ಗ್ರಾಮದಲ್ಲಿ ಮತದಾರರು ಹೆಚ್ಚು ಮತ ಚಲಾಯಹಿಸಿದ್ದು, ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಮತ ಚಲಾಯಿಸಲು ಶ್ರಮಿಸಿದ ಗ್ರಾಮದ ಯಜಮಾನರು, ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ, ಜೈಭೀಮ್ ಯುವಕ ಸಂಘದವರಿಗೆ ಅಭಿನಂದಿಸಿದ್ದಾರೆ.

Share this article