ಸೌಕರ್ಯ ಸೃಜನೆಯಲ್ಲಿ ಜನಸಂಖ್ಯೆ ಆಧರಿಸಿ ಧನ ವಿನಿಯೋಗ ಮುಖ್ಯ : ಜಿ.ಎಂ. ಗಂಗಾಧರಸ್ವಾಮಿ

KannadaprabhaNewsNetwork |  
Published : Aug 24, 2024, 01:31 AM ISTUpdated : Aug 24, 2024, 11:48 AM IST
ಕ್ಯಾಪ್ಷನಃ22ಕೆಡಿವಿಜಿ38ಃದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ   ವಿಶೇಷ ಘಟಕ, ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಜನಸಂಖ್ಯೆ ಆಧರಿಸಿ ಧನವಿನಿಯೋಗ ಆಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.

ದಾವಣಗೆರೆ  :  ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಜನಸಂಖ್ಯೆ ಆಧರಿಸಿ ಧನವಿನಿಯೋಗ ಆಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೀಸಲಿರಿಸಿದ ಅನುದಾನವನ್ನು ಆಸ್ತಿಗಳ ಸೃಜನೆ ಮತ್ತು ಮೂಲಭೂತ ಸೌಕರ್ಯಗಳನ್ನು ಸೃಜನೆ ಮಾಡುವಾಗ ಈ ವರ್ಗದ ಜನರು ಹೆಚ್ಚು ಇರುವ ಕಡೆ ಮತ್ತು ಅನುಕೂಲವಾಗುವ ನಿಟ್ಟಿನಲ್ಲಿ ಆಸ್ತಿಗಳ ಸೃಜನೆಯಾಗಬೇಕು. ಜನಸಂಖ್ಯೆಯೇ ಇಲ್ಲದ ಕಡೆ ಈ ಅನುದಾನ ಬಳಕೆ ಮಾಡಬಾರದೆಂದು ಸೂಚನೆ ನೀಡಿದರು.

ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಈಗಾಗಲೇ ಇಲಾಖಾವಾರು ಕ್ರಿಯಾ ಯೋಜನೆಗಳು ಅನುಮೋದನೆಯಾಗಿ ಅನುದಾನ ಬಿಡುಗಡೆಯಾಗಿದೆ. ಈ ಇಲಾಖೆಯವರು ಫಲಾನುಭವಿಗಳ ಯೋಜನೆಗಳಾಗಿದ್ದಲ್ಲಿ ಮುಂಚಿತವಾಗಿ ಅರ್ಜಿ ಆಹ್ವಾನಿಸಿ ಫಲಾನುಭವಿಗಳ ಆಯ್ಕೆ ಅಂತಿಮಗೊಳಿಸಿಕೊಳ್ಳಬೇಕು. ಹರಿಹರದ ಬೆಸ್ಕಾಂ ವಿಭಾಗಕ್ಕೆ ವಿದ್ಯುತ್ ಮೂಲಭೂತ ಸೌಕರ್ಯ ಸೃಜನೆಯಡಿ ಪರಿಶಿಷ್ಟ ಜಾತಿಗೆ ₹70 ಲಕ್ಷ ಮತ್ತು ಪರಿಶಿಷ್ಟ ಪಂಗಡದವರಿಗೆ ₹35 ಲಕ್ಷ ಬಿಡುಗಡೆಯಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.

ಇದಕ್ಕೆ ಜಿಲ್ಲಾಧಿಕಾರಿಯವರು ಕಾಲಮಿತಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಕ್ರಮ ವಹಿಸಬೇಕೆಂದು ತಿಳಿಸಿ, ಅಧಿಕ ಮಳೆಯಿಂದ ಹೊನ್ನಾಳಿ ಆಸ್ಪತ್ರೆ ಒಳಗೆ ನೀರು ನುಗ್ಗಿದ್ದು, ವಿದ್ಯುತ್ ಸಂಪರ್ಕದ ವೈರ್‌ಗಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಡಾ.ಮಹಂತೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 ಮುಂದಿನ ಸಭೆ ವೇಳೆಗೆ ಶೇ.100 ಸಾಧನೆ ಆಗಿರಲಿ ಎಸ್.ಸಿ.ಪಿ., ಟಿ.ಎಸ್.ಪಿ. ಕ್ರಿಯಾ ಯೋಜನೆ ಅನ್ವಯ ಜಿಲ್ಲೆಗೆ ಕೇಂದ್ರ, ರಾಜ್ಯ, ಜಿಲ್ಲೆ ಸೇರಿ ₹345.5 ಕೋಟಿಗಳಷ್ಟು ಅನುದಾನ ನಿಗದಿ ಮಾಡಿದೆ. ಇದರಲ್ಲಿ ₹125.31 ಕೋಟಿ ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ಅನುದಾನದಲ್ಲಿ ₹98.82 ಕೋಟಿ ಖರ್ಚು ಮಾಡಲಾಗಿದೆ. ನಿಗದಿತ ಗುರಿಗೆ ಶೇ. 28.60 ರಷ್ಟು ಸಾಧನೆ ಮಾಡಿದ್ದು, ಬಿಡುಗಡೆಯಾದ ಅನುದಾನವನ್ನು ಶೇ.78.86 ರಷ್ಟು ವೆಚ್ಚ ಮಾಡಲಾಗಿದೆ. ಮುಂದಿನ ಸಭೆ ವೇಳೆಗೆ ಬಿಡುಗಡೆಯಾದ ಅನುದಾನಕ್ಕೆ ಶೇ.100ರಷ್ಟು ಸಾಧನೆ ಮಾಡಿರಬೇಕೆಂದು ಎಲ್ಲ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

PREV

Recommended Stories

ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಬೆಂಗಳೂರಲ್ಲಿ ಭರ್ಜರಿ ಮಳೆಗೆ ವಾಹನ ಸವಾರರ ಪರದಾಟ