ಅಶ್ಲೀಲ ವೀಡಿಯೋ ಪತ್ತೆ ಪ್ರಕರಣ: ಎಸ್‌ಐಟಿ ತನಿಖೆಗೆ ಕಾಂಗ್ರೆಸ್‌ ಹಕ್ಕೊತ್ತಾಯ

KannadaprabhaNewsNetwork |  
Published : Jul 18, 2025, 12:45 AM IST
ಸಮಿತ್‌ರಾಜ್ ದರೆಗುಡ್ಡೆ ಪ್ರಕರಣಗಳ ಎಸ್‌ಐಟಿ ತನಿಖೆಗೆ ಒತ್ತಾಯ | Kannada Prabha

ಸಾರಾಂಶ

ಅಶ್ಲೀಲ ವಿಡಿಯೋಗಳನ್ನು ಮೊಬೈಲ್‌ನಲ್ಲಿ ಶೇಖರಿಸಿ ಬ್ಲಾಕ್‌ಮೇಲ್ ತಂತ್ರಗಾರಿಕೆ ನಡೆಸುತ್ತಿದ್ದ ಆರೋಪಿ ಸ್ಥಾನದಲ್ಲಿರುವ ಹಿಂದು ಸಂಘಟನೆಗಳ ಮುಖಂಡನ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಮುಂಭಾಗ ಮಂಗಳವಾರ ಹಕ್ಕೊತ್ತಾಯ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಅಶ್ಲೀಲ ವಿಡಿಯೋಗಳನ್ನು ಮೊಬೈಲ್‌ನಲ್ಲಿ ಶೇಖರಿಸಿ ಬ್ಲಾಕ್‌ಮೇಲ್ ತಂತ್ರಗಾರಿಕೆ ನಡೆಸುತ್ತಿದ್ದ ಆರೋಪಿ ಸ್ಥಾನದಲ್ಲಿರುವ ಹಿಂದು ಸಂಘಟನೆಗಳ ಮುಖಂಡನ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಮುಂಭಾಗ ಮಂಗಳವಾರ ಹಕ್ಕೊತ್ತಾಯ ಸಭೆ ನಡೆಯಿತು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ಮೊಬೈಲ್‌ನಲ್ಲಿ ಹಿಂದು ಹೆಣ್ಣು ಮಕ್ಕಳ, ವಿದ್ಯಾರ್ಥಿಗಳ 50 ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿರುವ ಹಿಂದು ಸಂಘಟನೆಗಳ ಮುಖಂಡನಾಗಿ ಗುರುತಿಸಿಕೊಂಡಿರುವ ಆರೋಪಿ ವಿರುದ್ಧ ಜನರು ಜಾಗೃತರಾಗಬೇಕೆಂದು ಹೇಳಿದರು.ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಹಿಂದು ಸಂಘಟಕ ಎಂದು ಪೋಸ್ ನೀಡುತ್ತಿರುವ ವ್ಯಕ್ತಿ ವಸೂಲಿ ದಂಧೆಯಲ್ಲಿ ತೊಡಗಿಸಿಕೊಂಡಿದ್ದು, ಮೂಡುಬಿದಿರೆ ಮಾರುಕಟ್ಟೆ ಒಳಗುತ್ತಿಗೆದಾರನಾಗಿ ಬಡ ವ್ಯಾಪಾರಸ್ಥರಿಂದ ಹೆಚ್ಚುವರಿ ದರ ವಸೂಲಿಗೆ ಇಳಿದಾಗ ತಾನು ಮುಂದೆ ನಿಂತು ಪ್ರತಿಭಟಿಸಿ ಆತನ ಮಾರ್ಕೇಟ್ ಗುತ್ತಿಗೆಯನ್ನು ರದ್ದು ಪಡಿಸಿರುವುದಾಗಿ ತಿಳಿಸಿದರು. ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮರೋಳಿ ಮಾತನಾಡಿ, ಅಶ್ಲೀಲ ವಿಡಿಯೋಗಳ ತನಿಖೆಗೆ ಆಗ್ರಹಿಸಿ ಇಲ್ಲಿಯ ಶಾಸಕರು ರಾಜ್ಯದ ಗೃಹ ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸುವಂತೆ ಸಲಹೆಯಿತ್ತರು. ಮೂಡುಬಿದಿರೆ ಬ್ಲಾಕ್ ಅಧ್ಯಕ್ಷ ಎಸ್. ಪ್ರವೀಣ್ ಕುಮಾರ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ಯುವ ಅಧ್ಯಕ್ಷ ಅನೀಶ್, ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಕಾಂಗ್ರೆಸ್ ಪ್ರಮುಖರಾದ ವಸಂತ ಬೆರ್ನಾರ್ಡ್, ಚಂದ್ರಹಾಸ ಸನಿಲ್, ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಮತ್ತಿತರರು ಇದ್ದರು.

PREV

Latest Stories

ಸಹನೆ, ತಾಳ್ಮೆ, ನೈತಿಕತೆಯಿಂದ ಯಶಸ್ಸು ಸಾಧ್ಯ
ಚಿಕ್ಕಬಳ್ಳಾಪುರಕ್ಕೂ ಬರಲಿದೆ ಕುಸುಮ್‌ ಯೋಜನೆ
ಆರೋಗ್ಯ ಇಲಾಖೆ ಸಿಬ್ಬಂದಿಗೆ ಹೆಪಟೈಟಿಸ್ ಬಿ ಲಸಿಕೆ