ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಮಂಗಳವಾರ “ಬಾಲ್ಯ ವಿವಾಹ ಮುಕ್ತ ಭಾರತ ಆಂದೋಲನದಡಿಯಲ್ಲಿ ಮಕ್ಕಳ, ಅಪ್ರಾಪ್ತ ವಯಸ್ಕರ ಬಲವಂತದ ವಿವಾಹ ನಿರ್ಮೂಲನೆಗಾಗಿ ಅಂತರಾಷ್ಟ್ರೀಯ ದಿನ ಕಾರ್ಯಕ್ರಮ
ಮಡಿಕೇರಿ: ಯುವಜನತೆ ಓದಿನ ಕಡೆ ಹೆಚ್ಚಿನ ಗಮನಹರಿಸಬೇಕು. ಪ್ರಸ್ತುತ ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ತಪ್ಪು ದಾರಿ ಹಿಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶುಭ ಅವರು ಹೇಳಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಮಂಗಳವಾರ “ಬಾಲ್ಯ ವಿವಾಹ ಮುಕ್ತ ಭಾರತ ಆಂದೋಲನದಡಿಯಲ್ಲಿ ಮಕ್ಕಳ, ಅಪ್ರಾಪ್ತ ವಯಸ್ಕರ ಬಲವಂತದ ವಿವಾಹ ನಿರ್ಮೂಲನೆಗಾಗಿ ಅಂತರಾಷ್ಟ್ರೀಯ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಚೋದನಾ ಸಂಸ್ಥೆ ಹಾಸನ, ಜಸ್ಟ್ ರೈಟ್ಸ್ ಫಾರ್ ಚಿಲ್ರನ್ನ್ ದೆಹಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ತಾಲ್ಲೂಕು ಪಂಚಾಯಿತಿ, ಪೊಲೀಸ್ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಸಮಗ್ರ ಮಕ್ಕಳ ರಕ್ಷಣಾ ಘಟಕ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ಮಡಿಕೇರಿ ತಹಶೀಲ್ದಾರ್ ಆರ್.ಶ್ರೀಧರ್ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪೋಕ್ಸೊ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ವಿ.ಅಂಬಿಕಾ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸಂಪ್ರದಾಯದ ಹೆಸರಿನಲ್ಲಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಬಾಲ್ಯ ವಿವಾಹ ತಡೆಯುವ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಾಯಕ ಸಬ್ ಇನ್ಸ್ ಪೆಕ್ಟರ್ ಸುಮತಿ, ಹಾಸನ ಪ್ರಚೋದನಾ ಸಂಸ್ಥೆಯ ನಿರ್ದೇಶಕ ಸಿ.ಸಿ.ಪೌಲೋಸ್ ಮಾತನಾಡಿದರು.ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕ ಎನ್.ಎಸ್.ಚಿದಾನಂದ ಅಧ್ಯಕ್ಷತೆ ವಹಿಸದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಉಪ ನಿರ್ದೇಶಕರಾದ ಪ್ರಭಾಕರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಕೀರ್ತನ್ ಮತ್ತಿತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.