ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಅಗತ್ಯ: ಗೌತಮ್ ಎಚ್. ಶೆಟ್ಟಿಗಾರ್

KannadaprabhaNewsNetwork |  
Published : Aug 28, 2026, 03:00 AM IST
ಮಕ್ಕಳ ಸುರಕ್ಷತೆಗೆ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಅಗತ್ಯ: ಗೌತಮ್ ಎಚ್. ಶೆಟ್ಟಿಗಾರ್ | Kannada Prabha

ಸಾರಾಂಶ

ಮಕ್ಕಳನ್ನು ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಶೋಷಣೆ ಹಾಗೂ ಅಶ್ಲೀಲ ಚಟುವಟಿಕೆಗಳಿಂದ ರಕ್ಷಿಸುವ ಉದ್ದೇಶದಿಂದ ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದ್ದು, ಪ್ರತಿಯೊಂದು ಮಗುವಿಗೂ ಸುರಕ್ಷಿತ ಹಾಗೂ ಗೌರವಯುತ ವಾತಾವರಣದಲ್ಲಿ ಬದುಕುವ ಹಕ್ಕನ್ನು ಖಾತರಿಪಡಿಸುವುದು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಎಂದು ತರಬೇತುದಾರ ಗೌತಮ್ ಎಚ್. ಶೆಟ್ಟಿಗಾರ್ ಹೇಳಿದರು.

ಮೂಡುಬಿದಿರೆ: ಮಕ್ಕಳನ್ನು ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಶೋಷಣೆ ಹಾಗೂ ಅಶ್ಲೀಲ ಚಟುವಟಿಕೆಗಳಿಂದ ರಕ್ಷಿಸುವ ಉದ್ದೇಶದಿಂದ ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದ್ದು, ಪ್ರತಿಯೊಂದು ಮಗುವಿಗೂ ಸುರಕ್ಷಿತ ಹಾಗೂ ಗೌರವಯುತ ವಾತಾವರಣದಲ್ಲಿ ಬದುಕುವ ಹಕ್ಕನ್ನು ಖಾತರಿಪಡಿಸುವುದು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಎಂದು ತರಬೇತುದಾರ ಗೌತಮ್ ಎಚ್. ಶೆಟ್ಟಿಗಾರ್ ಹೇಳಿದರು.

ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಹಕ್ಕುಗಳ ಸಂಘದ ವತಿಯಿಂದ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ‘ಪೋಕ್ಸೋ ಕಾಯ್ದೆ: ಸುರಕ್ಷತೆ, ಜಾಗೃತಿ ಮತ್ತು ಸಬಲೀಕರಣ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೋಕ್ಸೋ ಕಾಯ್ದೆಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಲೈಂಗಿಕ ದೌರ್ಜನ್ಯ ಹಾಗೂ ಶೋಷಣೆಯಿಂದ ರಕ್ಷಿಸುವ ಕಾನೂನು. ಮಕ್ಕಳ ಮೇಲಿನ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯವನ್ನು ಮುಚ್ಚಿಡದೆ, ಧೈರ್ಯದಿಂದ ಪೋಷಕರು, ಶಿಕ್ಷಕರು ಅಥವಾ ನಂಬಿಕೆಗೆ ಅರ್ಹರಾದ ಹಿರಿಯರ ಗಮನಕ್ಕೆ ತರುವುದು ಅಗತ್ಯ. ಇಂತಹ ಪ್ರಕರಣಗಳಲ್ಲಿ ಸಂತ್ರಸ್ತ ಮಕ್ಕಳಿಗೆ ಕಾನೂನು ರಕ್ಷಣೆ ದೊರೆಯುವಂತೆ ಕಾಯ್ದೆ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸುತ್ತದೆ. ಮಕ್ಕಳು ತಮ್ಮ ವೈಯಕ್ತಿಕ ವಿಚಾರಗಳು, ಸಮಸ್ಯೆಗಳು ಹಾಗೂ ಒತ್ತಡಗಳನ್ನು ಇತರರೊಂದಿಗೆ ಹಂಚಿಕೊಳ್ಳುವಾಗ ಎಚ್ಚರಿಕೆ ವಹಿಸಬೇಕು. ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು ಎದುರಿನ ವ್ಯಕ್ತಿ ನಂಬಿಕೆಗೆ ಅರ್ಹನೇ ಎಂಬುದನ್ನು ಪರಿಶೀಲಿಸಬೇಕು. ವಿಶೇಷವಾಗಿ ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಯ ಸಂದರ್ಭದಲ್ಲಿ ವೈಯಕ್ತಿಕ ಮಾಹಿತಿ ಮತ್ತು ಚಿತ್ರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್. ಮಾತನಾಡಿ, ಮಕ್ಕಳು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಪೋಷಕರು ಹಾಗೂ ಶಿಕ್ಷಕರೊಂದಿಗೆ ಹಂಚಿಕೊಂಡು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಮಕ್ಕಳ ಸುರಕ್ಷತೆ ಹಾಗೂ ಹಕ್ಕುಗಳ ಕುರಿತು ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳ ಸಂಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು.

ಆಪ್ತ ಸಮಾಲೋಚಕಿ ರೆನಿಟಾ ಡಿಸೋಜ ಉಪಸ್ಥಿತರಿದ್ದರು. ಮಕ್ಕಳ ರಕ್ಷಣಾ ಸಮಿತಿಯ ರಕ್ಷಣಾಧಿಕಾರಿ ಮಲ್ಲಿಕಾ ಎಂ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪನ್ಯಾಸಕಿ ಶ್ವೇತಾಶ್ರೀ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆ: ಐಶ್ವರ್ಯ, ಸ್ನೇಹಾ ಪ್ರಥಮ
ಕೇಸರೆಕರ ದಂಪತಿ ಹತ್ಯೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಲು ಆಗ್ರಹ