ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಿ

KannadaprabhaNewsNetwork |  
Published : Jul 12, 2026, 03:45 AM IST
ತಹಶೀಲ್ದಾರ್‌ ಟಿ.ರಮೇಶ್‌ಬಾಬು ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು | Kannada Prabha

ಸಾರಾಂಶ

ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಶ್ ಸಮಿತಿ (ಪಿಒಎಸ್‌ಎಚ್‌) ರಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚಿಸಿದ್ದಾರೆ.

ಮಂಗಳೂರು: ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಶ್ ಸಮಿತಿ (ಪಿಒಎಸ್‌ಎಚ್‌) ರಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚಿಸಿದ್ದಾರೆ.

ಅವರು ಇತ್ತೀಚೆಗೆ ಮಂಗಳೂರು ತಾಲೂಕು ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾದಕ ಮತ್ತು ವ್ಯಸನ ನಿಷೇಧ ಯೋಜನೆ, ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಸಮಿತಿ, ಭಾಗ್ಯಲಕ್ಷ್ಮಿ ಯೋಜನೆಯ ಕಾರ್ಯಪಡೆ ಸಮಿತಿ, ಅಂಗವಿಕಲ ಕುಂದು ಕೊರತೆ ನಿವಾರಣೆ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಮಾರಾಟ ಹಾಗೂ ಸಾಗಾಟ ತಡೆ ಸಮಿತಿ, ಬಾಲ್ಯ ವಿವಾಹ ನಿಷೇಧ ಸಮಿತಿ, ಮಕ್ಕಳ ರಕ್ಷಣಾ ಸಮಿತಿ, ಬೇಟಿ ಬಚಾವೋ ಬೇಟಿ ಪಡಾವೋ ಸಮಿತಿ, ಮಾತ್ರವಂದನ ಯೋಜನೆ ಸಮಿತಿಯ ಪ್ರಗತಿ ಪರಿಶೀಲಿಸಿದರು.

ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಕಳೆದ 3 ತಿಂಗಳಲ್ಲಿ 4 ಪ್ರಕರಣಗಳು ದಾಖಲಾಗಿದ್ದು, 3 ಪ್ರಕರಣಗಳು ಸಮಾಲೋಚನಾ ಹಂತದಲ್ಲಿದೆ. ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಷೇಧದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ತಾಯಂದಿರ ಸಭೆ ಹಾಗೂ ಸ್ತ್ರೀ ಶಕ್ತಿ ಸಭೆಗಳಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದು ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ ಸಭೆಗೆ ಮಾಹಿತಿ ನೀಡಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿರಿಯಡ್ಕ ಶಾಲೆಯಲ್ಲಿ ಮಾದಕ ದ್ರವ್ಯ ಜಾಗೃತಿ
ಝೀನತ್‌ ವಿರುದ್ಧ ಇನ್ನೂ 2 ಪ್ರಕರಣ ದಾಖಲು