ದೊಡ್ಡಬಳ್ಳಾಪುರ: ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯ ಕಾಳಜಿ ವಹಿಸುವುದು ಪೋಷಣ್ ಮಾಸಾಚರಣೆಯ ಪ್ರಮುಖ ಉದ್ದೇಶ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮಿ ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾರೂ ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರದ ಕುರಿತು ಅರಿವು ಮೂಡಿಸುವ ಜವಾಬ್ದಾರಿ ವಹಿಸಲಾಗಿದೆ ಎಂದರು.
ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿನೋದ್ ಮಾತನಾಡಿ, ಸರ್ಕಾರ ಮಾತೃ ವಂದನಾ ಯೋಜನೆ, ಮಾತೃಪೂರ್ಣ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರತಿಯೊಂದು ಮಗುವೂ ಅಪೌಷ್ಟಿಕತೆಯಿಂದ ಮುಕ್ತವಾಗಿರಬೇಕು ಎಂಬುದು ಈ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು ವಿವಿದ ಬಗೆಯ ಹಣ್ಣು ತರಕಾರಿ ಸೊಪ್ಪು ಸಿರಿಧಾನ್ಯಗಳಲ್ಲಿ ಅಲಂಕಾರ ಮಾಡಲಾಗಿದ್ದು ಐಸಿಡಿಎಸ್ ಕಾರ್ಯಕ್ರಮಗಳ ಜಾಗಯ ಫಲಕಗಳನ್ನು ಅಳವಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಎಸಿಡಿಪಿಒ ಅರುಣ್ ಕುಮಾರ್, ರೂಪ, ಮೇಲ್ವಿಚಾರಕರಾದ ನಿರ್ಮಲಾ, ಚೇತನಾ,ಲಕ್ಷ್ಮೀ, ಜಯಲಕ್ಷ್ಮಿ, ಮಾಲಾ, ಕಸಬಾ-1ನೇ ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ರೋಜಿಪುರ ಅಂಗನವಾಡಿ ಶಿಕ್ಷಕಿ ಶೈಲಾಜಾ ಗೌಡ ಹಾಗೂ ಸ್ತ್ರೀಶಕ್ತಿ ಸಂಘದ ಮಹಿಳೆಯರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ನಗರದ ಕಸಬಾ-1ನೇ ವೃತ್ತದ ರೋಜಿಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.