ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬೆಂ.ಗ್ರಾ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರಿ ಶಾಲೆ ಉಳಿಸಿ - ಕನ್ನಡ ಬೆಳೆಸಿ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.
ತಾವೂ ಕನ್ನಡ ಮಾಧ್ಯಮದ ವಿದ್ಯಾರ್ಥಿಯಾಗಿದ್ದು, ಕನ್ನಡ ಮಾಧ್ಯಮ ಯಶಸ್ಸಿಗೆ ಅಡ್ಡಿಯಾಗುವುದಿಲ್ಲ. ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಸ್ಥಳೀಯ ಭಾಷೆಯಲ್ಲಿಯೇ ಓದಿ ಯುಪಿಎಸ್‌ಸಿ ಸೇರಿದಂತೆ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುತ್ತಿದ್ದಾರೆ. ಇದು ಮಾತೃಭಾಷೆಯಲ್ಲಿಯೇ ಉನ್ನತ ಸಾಧನೆ ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.ಸರ್ಕಾರಿ ಶಾಲೆಗಳಲ್ಲಿ ಇಂದು ಅಗತ್ಯ ಮೂಲಸೌಕರ್ಯಗಳು ಲಭ್ಯವಿವೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣ ಪಡೆದರೆ ಖಂಡಿತವಾಗಿಯೂ ಉತ್ತಮ ಫಲಿತಾಂಶ ಸಿಗಬಹುದು. ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಜಾಗರೂಕರಾಗಬೇಕು, ಆದರೆ ಭಾಷೆಯ ಆಧಾರದ ಮೇಲೆ ಶಾಲೆ ಆಯ್ಕೆ ಮಾಡುವ ಧೋರಣೆ ಸಲ್ಲದು. ಈ ಕುರಿತು ಜಾಗೃತಿ ಮೂಡಿಸಲು ನವ ಕರ್ನಾಟಕ ಯುವಶಕ್ತಿ ವೇದಿಕೆ ಆರಂಭಿಸಿರುವ ಸರ್ಕಾರಿ ಶಾಲೆ ಉಳಿಸಿ- ಕನ್ನಡ ಬೆಳೆಸಿ ಅಭಿಯಾನ ಶ್ಲಾಘನೀಯ ಎಂದರು.
ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ, ಕೆಲ ಜಾಗೃತ ಪಾಲಕರು ಸಮಾಜದ ಬದಲಾವಣೆಗೆ ಮಾದರಿಯಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ವೇದಿಕೆ ಇಂತಹ ಪೋಷಕರು ಹಾಗೂ ಮಕ್ಕಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಸಕಾರಾತ್ಮಕ ಸಂದೇಶ ನೀಡುತ್ತಿದೆ ಎಂದರು.