ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಇಲ್ಲಿನ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ನೇತೃತ್ವದಲ್ಲಿ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಮತ್ತು ಜಾಲಪ್ಪ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾನಸಿಕ ಆರೋಗ್ಯವು ವ್ಯಕ್ತಿಯ ಆಲೋಚನೆಗಳು, ಭಾವನೆಗಳು ಮತ್ತು ನಡವಳಿಕೆಗಳ ಮೇಲೆ ಪರಿಣಾಮ ಬೀರುವ ಅರಿವಿನ, ನಡವಳಿಕೆಯ ಮತ್ತು ಭಾವನಾತ್ಮಕ ಯೋಗಕ್ಷೇಮದ ಸ್ಥಿತಿಯಾಗಿದೆ. ಇದು ನಿಮ್ಮ ಜೀವನದ ಪ್ರಮುಖ ಭಾಗವಾಗಿದೆ ಮತ್ತು ನಿಮ್ಮ ದೈನಂದಿನ ಜೀವನ, ಸಂಬಂಧಗಳು ಮತ್ತು ಒತ್ತಡವನ್ನು ನಿಭಾಯಿಸುವ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಮಾನಸಿಕ ಅಸ್ವಸ್ಥತೆಯ ಲಕ್ಷಣಗಳು ಕಂಡುಬಂದರೆ, ವೃತ್ತಿಪರರ ಸಹಾಯ ಪಡೆಯುವುದು ಮುಖ್ಯ ಎಂದು ತಿಳಿಸಿದರು.ಮಾನಸಿಕ ಆರೋಗ್ಯ ಕಾಳಜಿ ವಹಿಸುವುದರಿಂದ ವ್ಯಕ್ತಿಗತ ಉತ್ಪಾದಕತೆ ಮತ್ತು ಪರಿಣಾಮಕಾರಿತ್ವ ಹೆಚ್ಚುವುದರ ಜೊತೆಗೆ ಸದೃಢ ಸಂಬಂಧಗಳನ್ನು ಉತ್ತೇಜಿಸುತ್ತದೆ. ಜೀವನದಲ್ಲಿನ ಬದಲಾವಣೆಗಳಿಗೆ ಹೊಂದಿಕೊಳ್ಳಲು ಮತ್ತು ಪ್ರತಿಕೂಲತೆಯನ್ನು ಎದುರಿಸಲು ಸಹಾಯವಾಗುತ್ತದೆ ಎಂದು ವಿವರಿಸಿದರು.
ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಗೌರಪ್ಪ, ಜಾಲಪ್ಪ ಕಾನೂನು ಕಾಲೇಜು ಪ್ರಾಂಶುಪಾಲ ಹನುಮಂತಪ್ಪ ಜಿ.ಟಿ, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಲಯನ್ಸ್ ಕ್ಲಬ್ ಆಡಳಿತಾಧಿಕಾರಿ ಡಾ.ಶ್ರೀನಿವಾಸರೆಡ್ಡಿ, ಕಾರ್ಯದರ್ಶಿ ಸುಮ ಎ.ಎಸ್, ಉಪಾಧ್ಯಕ್ಷ ಬಾಬು ಸಾಬಿ, ಲಯನ್ ಲತಾ, ಪ್ರಕಾಶ್, ಎಲ್.ಎನ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ-11ಕೆಡಿಬಿಪಿ1- ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನಿಂದ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.