ಯಲಬುರ್ಗಾದಲ್ಲಿ ನರ್ಸಿಂಗ್ ಕಾಲೇಜು ನಿರ್ಮಾಣ ಸಾಧ್ಯತೆ

KannadaprabhaNewsNetwork |  
Published : Jan 02, 2025, 12:33 AM IST
೩೧ವೈಎಲ್‌ಬಿ೧:ಯಲಬುರ್ಗಾದ ನೂರು ಹಾಸಿಗೆ ಸಾರ್ವಜನಿಕ ಆಸ್ಪತ್ರೆ ನೋಟ. | Kannada Prabha

ಸಾರಾಂಶ

ಪಟ್ಟಣದಲ್ಲಿ ನೂತನ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜು ಸ್ಥಾಪಿಸಬೇಕೆನ್ನುವ ಈ ಭಾಗದ ಜನರ ದಶಕಗಳ ಕನಸು ನನಸಾಗುವ ಕಾಲ ಕೂಡಿ ಬರುವ ಸಾಧ್ಯತೆ ಇದೆ.

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಪಟ್ಟಣದಲ್ಲಿ ನೂತನ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜು ಸ್ಥಾಪಿಸಬೇಕೆನ್ನುವ ಈ ಭಾಗದ ಜನರ ದಶಕಗಳ ಕನಸು ನನಸಾಗುವ ಕಾಲ ಕೂಡಿ ಬರುವ ಸಾಧ್ಯತೆ ಇದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಸಿಎಂ ಆರ್ಥಿಕ ಸಲಹೆಗಾರ, ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಈ ಕುರಿತು ಪತ್ರ ಬರೆದು ಮಂಜೂರು ಮಾಡುವಂತೆ ಮನವಿ ಮಾಡಿದ ಹಿನ್ನೆಲೆ ಸಚಿವರಿಂದ ಸಕರಾತ್ಮಕ ಪ್ರತಿಕ್ರಿಯೆ ಸಿಕ್ಕಿದ್ದು, ಈ ಭಾಗದ ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಾಗೂ ಕೊಪ್ಪಳ ಮೆಡಿಕಲ್ ಕಾಲೇಜಿಗೆ ಅನುಕೂಲವಾಗುವ ಉದ್ದೇಶದಿಂದ ಬಿಎಸ್ಸಿ ನರ್ಸಿಂಗ್ ಕಾಲೇಜು ತೆರೆಯಲು ಸರ್ಕಾರದ ಸೂಚನೆ ಮೇರೆಗೆ ಆರೋಗ್ಯ ಇಲಾಖೆಯಿಂದ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ಕೊಪ್ಪಳದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ವೈಜನಾಥ ಇಟಗಿ, ಜಿಲ್ಲಾ ಡಿಎಚ್‌ಒ ಟಿ. ಲಿಂಗರಾಜ, ಬೆಂಗಳೂರಿನ ಕೆಎಸ್ ಡಿಎನ್‌ಇಬಿ ಕಾರ್ಯದರ್ಶಿ ಮಡಿವಾಳಪ್ಪ ನಾಗರಳ್ಳಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನೋಡಲ್ ಅಧಿಕಾರಿ ಶ್ರೀಕಾಂತ್ ಪುಲಾರಿ ಅವರ ನೇತೃತ್ವದ ನಾಲ್ಕು ಜನರ ಸಮಿತಿ ರಚನೆ ಮಾಡಿದ್ದು ಶೀಘ್ರದಲ್ಲೇ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಪ್ರಸ್ತಾವನೆ ಸಲ್ಲಿಕೆ:

ನಂಜುಂಡಪ್ಪ ವರದಿ ಪ್ರಕಾರ ಯಲಬುರ್ಗಾ ಅತ್ಯಂತ ಹಿಂದುಳಿದ ತಾಲೂಕಾಗಿದೆ. ಶೈಕ್ಷಣಿಕ ಆರೋಗ್ಯ ಕ್ಷೇತ್ರ ಆರ್ಥಿಕವಾಗಿ ತೀರಾ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿ ಅಪೌಷ್ಟಿಕತೆ ಬಹಳಷ್ಟಿದ್ದು, ಬಾಣಂತಿಯರ ಶಿಶುಮರಣ ಹೆಚ್ಚಾಗಿರುತ್ತದೆ. ಹೀಗಾಗಿ ಪಟ್ಟಣದಲ್ಲಿ ನರ್ಸಿಂಗ್ ಕಾಲೇಜು ಅಗತ್ಯವಾಗಿದೆ. ಇಲ್ಲಿ ಕಾಲೇಜು ನಿರ್ಮಾಣವಾದರೆ ಇಲ್ಲಿಯ ಜನರಿಗೆ ಈ ಭಾಗದ ಬಡ ಜನತೆಗೆ ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ. ಜತೆಗೆ ಯುವಕರಿಗೆ ಉದ್ಯೋಗಾವಕಾಶ ದೊರೆಯಲಿದೆ ಹೀಗಾಗಿ ಈ ಕ್ಷೇತ್ರಕ್ಕೆ ಕಾಲೇಜು ನೀಡಬೇಕೆಂದು ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಮನವಿ ಮಾಡಿದ್ದರು.ಕೆಕೆಆರ್‌ಡಿಬಿ ಅನುದಾನ:

ಕಾಲೇಜು ಕಟ್ಟಡಕ್ಕೆ ಬೇಕಾದ ಅನುದಾನವನ್ನು ೨೦೨೫-೨೬ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಯೋಜನೆಯಡಿ ₹೬ ಕೋಟಿ ನೀಡಲಾಗುತ್ತಿದ್ದು, ಈ ನರ್ಸಿಂಗ್ ಕಾಲೇಜಿಗೆ ಬೇಕಾಗಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಮುಂದಿನ ೩ ವರ್ಷಗಳ ವೇತನವನ್ನು ಕೂಡ ೨೦೨೫-೨೬ನೇ ಸಾಲಿನ ಕೆಕೆಆರ್‌ಡಿಬಿ ಅನುದಾನದಲ್ಲಿ ನೀಡುವುದಕ್ಕೆ ಅವಕಾಶಗಳಿವೆ.

ಅಗತ್ಯಕ್ರಮ:ಹೊಸ ಕಾಲೇಜು ಕಟ್ಟಡ ನಿರ್ಮಾಣಕ್ಕೆ ೬ಕೋಟಿ ರು,ಅನುದಾನ,ಸಿಬ್ಬಂದಿ ವೇತನಕ್ಕೆ ಅಗತ್ಯ ಕ್ರಮ ವಹಿಸಲಾಗಿದ್ದು, ಅಂದಾಜು ೧೦ಎಕರೆ ಭೂಮಿ ಗುರುತಿಸಲಾಗಿದೆ. ಮೊದಲ ವರ್ಷ ೬೦ ಸರಕಾರಿ ಸೀಟ್‌ಗಳು ಲಭ್ಯವಿದ್ದು, ಮಹಿಳೆ ಮತ್ತು ಪುರುಷ ವಿದ್ಯಾರ್ಥಿಗಳಿಗೆ ತಲಾ ೩೦ ಸೀಟ್ ಮೀಸಲಿರಿಸಲಾಗಿದೆ. ಅದರಲ್ಲಿ ಶೇ. ೮೦ರಷ್ಟು ಸ್ಥಳೀಯ ವಿದ್ಯಾರ್ಥಿಗಳಿಗೆ ಮೀಸಲಿರಿಸಿದೆ.ಬಿಎಸ್ಸಿ ನರ್ಸಿಂಗ್ ಕಾಲೇಜು ಈ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾಗಿದ್ದು, ಅದನ್ನು ಮಂಜೂರು ಮಾಡಿಕೊಂಡುವಂತೆ ಈಗಾಗಲೇ ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದರಿಂದ ಶೀಘ್ರ ಮಾಡುವ ಭರವಸೆ ನೀಡಿದ್ದಾರೆ. ಮುಂದಿನ ವರ್ಷದಲ್ಲೇ ಈ ಕಾಲೇಜು ಪ್ರಾರಂಭಿಸಿ ಇಲ್ಲಿಯ ಬಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಅನುಕೂಲ ಕಲ್ಪಿಸಿಕೊಡಬೇನ್ನುವ ಉದ್ದೇಶ ನನ್ನದಾಗಿದೆ ಎಂದು ಶಾಸಕ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿತ್ವ ರೂಪಿಸುವುದೇ ಮನೆಗೊಂದು ಗ್ರಂಥಾಲಯದ ಉದ್ದೇಶ-ಡಾ. ಮಾನಸ
ಲೋಕಾ ದಾಳಿಗೆ ಹೆದರಿ ಬಾತ್‌ರೂಂನಲ್ಲಿ ಹಣ ಪ್ಲಶ್‌ ಮಾಡಿದ ಅಧಿಕಾರಿ