ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂಚೆ ಮತಪತ್ರ ಸಂಬಂಧಿಸಿದಂತೆ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಅಂಚೆ ಮತಪತ್ರವನ್ನು ಆನ್‌ಲೈನ್ ಮೂಲಕ ನಮೂನೆ 12 ಡಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.85 ವರ್ಷ ಮೇಲಿನವರಿಗೆ, ವಿಕಲಚೇತನರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾಧ್ಯವಾದಷ್ಟು ಮತಗಟ್ಟೆ ಕೇಂದ್ರಗಳಿಗೆ ಹೋಗಿ ಮತಹಕ್ಕು ಚಲಾಯಿಸುವಂತಾಗಬೇಕು. ಮತಗಟ್ಟೆ ಕೇಂದ್ರಕ್ಕೆ ತೆರಳಿ ಮತದಾನ ಮಾಡಲು ಸಾಧ್ಯವಾಗದಿರುವವರಿಗೆ ಅಂಚೆ ಮತಪತ್ರದ ಮೂಲಕ ಮತಹಕ್ಕು ಚಲಾಯಿಸಬಹುದಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ನಿಗದಿತ ದಿನಾಂಕದೊಳಗೆ ಅಂಚೆ ಮತಪತ್ರ ವಿತರಿಸಿ ಮತ್ತು ದೃಢೀಕರಣ ಪತ್ರ ಪಡೆಯಬೇಕು. ಯಾವುದೇ ಅರ್ಹ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂದು ಜಿಲ್ಲಾಧಿಕಾರಿ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಅಗತ್ಯ ಸೇವೆಗಳ ಇಲಾಖೆಯಡಿ ಕರ್ತವ್ಯ ನಿರ್ವಹಿಸುವ ಸುಮಾರು 12 ಇಲಾಖೆಗಳು ಬರಲಿದ್ದು, ಚುನಾವಣಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಒಳಗೊಂಡ ಅಂಚೆ ಮತಪತ್ರದ ಪಟ್ಟಿ ಕಳುಹಿಸಲಾಗಿದೆ. ಹಾಗೆಯೇ 85 ವರ್ಷ ಮೇಲ್ಪಟ್ಟವರು 5 ಸಾವಿರಕ್ಕೂ ಹೆಚ್ಚು ಹಾಗೂ ವಿಕಲಚೇತನರು 4 ಸಾವಿರ ಮಂದಿ ಇದ್ದಾರೆ ಎಂದು ತಿಳಿಸಿದರು.
ಅಂಚೆ ಮತಪತ್ರ ನೋಡಲ್ ಅಧಿಕಾರಿ ಅನಿತಾ ಭಾಸ್ಕರ್, ಎನ್‌ಐಸಿಯ ಅಜಿತ್ ಅವರು ಅಂಚೆ ಮತಪತ್ರ ಬಗ್ಗೆ ಹಲವು ಮಾಹಿತಿ ನೀಡಿದರು. ಕೆ.ಸಿ.ದಯಾನಂದ, ವಿಜಯ್, ನಾಗರಾಜ ಆಚಾರ್, ಸಂಜಯ್ ಕುಮಾರ್ ಮತ್ತಿತರರು ಇದ್ದರು.