ಮತಗಟ್ಟೆ ಅಧಿಕಾರಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ

KannadaprabhaNewsNetwork |  
Published : Apr 05, 2024, 01:03 AM IST
ಮತದಾನ | Kannada Prabha

ಸಾರಾಂಶ

ಎರಡನೇ ಹಂತದ ತರಬೇತಿ ವೇಳೆಯಲ್ಲಿ ಅಂಚೆ ಮತದಾನಕ್ಕೆ ಅರ್ಹರಿರುವ ಮತದಾರರಿಗೆ ತರಬೇತಿ ಕೇಂದ್ರಗಳಲ್ಲಿ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಿ ಅಂಚೆ ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕುಂದಾಪುರ, ಉಡುಪಿ, ಕಾಪು ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಅಗತ್ಯವಿರುವ ಮತಗಟ್ಟೆ ಅಧ್ಯಕ್ಷ ಅಧಿಕಾರಿಗಳಿಗೆ ಮತ್ತು ಸಹಾಯಕ ಅಧ್ಯಕ್ಷ ಅಧಿಕಾರಿಗಳಿಗೆ ಮಾ.22ರಂದು ನೇಮಕಾತಿ ಆದೇಶದೊಂದಿಗೆ ಅಂಚೆ ಮತಪತ್ರ ಕೋರಿಕೆ ಅರ್ಜಿ ನಮೂನೆ-12 ಮತ್ತು ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ಕೋರಿಕೆ ನಮೂನೆ -12 ಜಾರಿ ಮಾಡಲಾಗಿರುತ್ತದೆ.

ಈ ನಮೂನೆಗಳನ್ನು ಸ್ವೀಕರಿಸದೇ ಇರುವ ಅಧಿಕಾರಿಗಳು ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಅಥವಾ ತಹಸೀಲ್ದಾರರ ಕಚೇರಿಗೆ ತೆರಳಿ ನಮೂನೆಗಳನ್ನು ಪಡೆಯಬಹುದಾಗಿದೆ.

ಇದೇ ರೀತಿ ಇತರೆ ಮತಗಟ್ಟೆ ಅಧಿಕಾರಿಗಳಿಗೆ ನೇಮಕಾತಿ ಆದೇಶ ಜಾರಿ ಪ್ರಕ್ರಿಯೆ ಆರಂಭಗೊಂಡಿದ್ದು, ಒಂದು ವೇಳೆ ನಮೂನೆ 12 ಮತ್ತು 12ಎ ಸ್ವೀಕರಿಸದೇ ಇದ್ದಲ್ಲಿ ಅವರು ಸಹ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಅಥವಾ ತಹಸೀಲ್ದಾರರ ಕಚೇರಿಗೆ ತೆರಳಿ ನಮೂನೆಗಳನ್ನು ಪಡೆಯಬಹುದಾಗಿದೆ.

ಪ್ರಸ್ತುತ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಮತದಾನ ದಿನದಂದು ಮತಗಟ್ಟೆ ಕರ್ತವ್ಯಕ್ಕಾಗಿ ನಿಯೋಜಿಸಿದ ಎಲ್ಲ ಮತಗಟ್ಟೆ ಅಧಿಕಾರಿಗಳು ಈ ಮೇಲೆ ಸೂಚಿಸಿದಂತೆ ಅಗತ್ಯತೆಗೆ ಅನುಸಾರವಾಗಿ ನಮೂನೆ 12 ಮತ್ತು 12ಎ ಗಳನ್ನು ಪಡೆದು, ಏ.7ರ ಒಳಗಾಗಿ ಭರಿಸಿದ ನಮೂನೆಗಳನ್ನು ಚುನಾವಣಾ ಗುರುತಿನ ಚೀಟಿ ನಕಲು ಪ್ರತಿ ಮತ್ತು ನೇಮಕಾತಿ ಆದೇಶದ ನಕಲು ಪ್ರತಿಯೊಂದಿಗೆ ಕೋರಿಕೆಯನ್ನು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.

ಎರಡನೇ ಹಂತದ ತರಬೇತಿ ವೇಳೆಯಲ್ಲಿ ಅಂಚೆ ಮತದಾನಕ್ಕೆ ಅರ್ಹರಿರುವ ಮತದಾರರಿಗೆ ತರಬೇತಿ ಕೇಂದ್ರಗಳಲ್ಲಿ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಿ ಅಂಚೆ ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ