ಮುಖ್ಯಮಂತ್ರಿ ಮನೆ ಚಲೋ: ಕಟ್ಟಡ ಕಾರ್ಮಿಕರಿಂದ ಪೋಸ್ಟರ್ ಬಿಡುಗಡೆ

KannadaprabhaNewsNetwork |  
Published : Jul 22, 2024, 01:21 AM IST
ಕ್ಯಾಪ್ಷನಃ21ಕೆಡಿವಿಜಿ36ಃದಾವಣಗೆರೆಯಲ್ಲಿ ಕಟ್ಟಡ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. | Kannada Prabha

ಸಾರಾಂಶ

ರಾಜ್ಯದ ಉಚ್ಛ ನ್ಯಾಯಾಲಯ ಆದೇಶದಂತೆ ಶೈಕ್ಷಣಿಕ ಧನಸಹಾಯ ಪಾವತಿ ಮಾಡಿ, ಬೋಗಸ್ ಖರೀದಿ ಪ್ರಕ್ರಿಯೆ ನಿಲ್ಲಿಸಿ, ಕಾರ್ಮಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸಮರ್ಪಕ ಜಾರಿ ಮಾಡುವಂತೆ ಅಗ್ರಹಿಸಿ, ಆಗಸ್ಟ್ 5ರಂದು ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಮುಖ್ಯಮಂತ್ರಿ ಮನೆ ಚಲೋ ಕಾರ್ಯಕ್ರಮ ನಡೆಯಲಿದೆ. ಇದರ ಪೂರ್ವಭಾವಿಯಾಗಿ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಭಾನುವಾರ ಕಟ್ಟಡ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ಪೋಸ್ಟರ್ ಬಿಡುಗಡೆ ಮೂಲಕ ಪ್ರತಿಭಟನೆ ನಡೆಸಿತು.

ದಾವಣಗೆರೆ: ರಾಜ್ಯದ ಉಚ್ಛ ನ್ಯಾಯಾಲಯ ಆದೇಶದಂತೆ ಶೈಕ್ಷಣಿಕ ಧನಸಹಾಯ ಪಾವತಿ ಮಾಡಿ, ಬೋಗಸ್ ಖರೀದಿ ಪ್ರಕ್ರಿಯೆ ನಿಲ್ಲಿಸಿ, ಕಾರ್ಮಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸಮರ್ಪಕ ಜಾರಿ ಮಾಡುವಂತೆ ಅಗ್ರಹಿಸಿ, ಆಗಸ್ಟ್ 5ರಂದು ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಮುಖ್ಯಮಂತ್ರಿ ಮನೆ ಚಲೋ ಕಾರ್ಯಕ್ರಮ ನಡೆಯಲಿದೆ. ಇದರ ಪೂರ್ವಭಾವಿಯಾಗಿ ನಗರದ ಜಯದೇವ ವೃತ್ತದಲ್ಲಿ ಭಾನುವಾರ ಕಟ್ಟಡ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ಪೋಸ್ಟರ್ ಬಿಡುಗಡೆ ಮೂಲಕ ಪ್ರತಿಭಟನೆ ನಡೆಸಿತು.

ಸಮಿತಿ ಜಿಲ್ಲಾ ಸಂಚಾಲಕ ಆವರಗೆರೆ ಎಚ್.ಜಿ.ಉಮೇಶ್ ಪೋಸ್ಟರ್ ಬಿಡುಗಡೆಗೊಳಿಸಿ, ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶ ವಾಪಸ್ ಪಡೆಯಬೇಕು. ಹೈಕೋರ್ಟ್ ನೀಡಿದ ಆದೇಶದಂತೆ 2021ರ ಅಧಿಸೂಚನೆ ಅನ್ವಯಿಸಿ ಶೈಕ್ಷಣಿಕ ಧನಸಹಾಯ ಬಿಡುಗಡೆ ಮಾಡಬೇಕು. 2022-23-24ನೇ ಸಾಲುಗಳ ಬಾಕಿ ಅರ್ಜಿಗಳಿಗೂ ಧನಸಹಾಯ ಪಾವತಿಸಬೇಕು. ನೈಜ ಕಾರ್ಮಿಕರ ನೋಂದಣಿ ಮತ್ತು ಮರುನೋಂದಣಿ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುವುದು ನಿಲ್ಲಬೇಕು. ವಿಳಂಬ ಮಾಡದೇ ಕಾರ್ಡು ವಿತರಣೆ ಆಗಬೇಕು. ಕಾರ್ಮಿಕರ ಹಲವು ಸೌಲಭ್ಯಗಳಿಗೆ ಸಲ್ಲಿಸಿರುವ ಸಾವಿರಾರು ಅರ್ಜಿಗಳು ಶೀಘ್ರವೇ ವಿಲೇವಾರಿ, ಪಿಂಚಣಿದಾರರಿಗೆ ಶೀಘ್ರ ಹಣ ಬಿಡುಗಡೆ, ಪಿಂಚಣಿಗೆ ಅರ್ಜಿ ಸಲ್ಲಿಸುವಲ್ಲಿ ಆಗುತ್ತಿರುವ ತಾಂತ್ರಿಕ ತೊಂದರೆಗಳ ನಿವಾರಿಸಬೇಕು ಎಂದರು.

ಸಮಿತಿಯ ಕೆ.ಎಚ್.ಆನಂದರಾಜ ಮಾತನಾಡಿ, ಬಾಕಿ ಇರುವ ಸೆಸ್ ಸಂಗ್ರಹ ಮಾಡಿ, ಬೃಹತ್ ಖಾಸಗಿ ಹಾಗೂ ಸಾರ್ವಜನಿಕ ನಿರ್ಮಾಣಗಳಿಗೆ ಶೇ.2ರಷ್ಟು ಸೆಸ್ ವಿಧಿಸಬೇಕು. ಕಲ್ಯಾಣ ಮಂಡಳಿ ಪುನರಚಿಸಿ ಕೇಂದ್ರ ಕಾರ್ಮಿಕ ಸಂಘಗಳ ಪ್ರತಿನಿಧಿಗಳ ನೇಮಿಸಿ, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

ವಿ.ಲಕ್ಷ್ಮಣ್, ಶಿವಕುಮಾರ ಡಿ.ಶೆಟ್ಟರ್, ಎಸ್.ಎಂ. ಸಿದ್ದಲಿಂಗಪ್ಪ, ಎಚ್.ಕೆ.ಆರ್. ಸುರೇಶ್, ಐರಣಿ ಚಂದ್ರು, ಕೆ.ಎಸ್.ಆದಿಲ್ ಖಾನ್, ಎಸ್.ಪರಮೇಶ್, ಕುಕ್ಕುವಾಡ ಮಂಜುನಾಥ, ಪವಿತ್ರಾ ಇತರರು ಭಾಗವಹಿಸಿದ್ದರು.

- - - -21ಕೆಡಿವಿಜಿ36ಃ:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ