- 3 ಪರೀಕ್ಷಾ ಕೇಂದ್ರಗಳಲ್ಲಿ 557 ಪರೀಕ್ಷಾರ್ಥಿಗಳು । ಪರೀಕ್ಷೆ ಸುಗಮವಾಗಿ ನಡೆಸಲು ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಕಂಪ್ಯೂಟರ್ ಆಧಾರಿತ ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯು **(NEET PG)** ಆಗಸ್ಟ್ 30ರಂದು ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಸುಗಮವಾಗಿ ಮತ್ತು ಶಿಸ್ತಿನಿಂದ ಜರುಗಿಸಲು ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನೀಟ್ ಪಿಜಿ ಪರೀಕ್ಷಾ ಸಿದ್ಧತೆಗಳ ಕುರಿತು ಏರ್ಪಡಿಸಿದ್ದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಯು ಆಗಸ್ಟ್ 30ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12:30 ರವರೆಗೆ ನಡೆಯಲಿದೆ. ಪರೀಕ್ಷಾರ್ಥಿಗಳಿಗೆ ಬೆಳಗ್ಗೆ 7 ಗಂಟೆಯಿಂದಲೇ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಗಾಳಿ, ಬೆಳಕು, ಕುಡಿಯುವ ನೀರು, ಶೌಚಾಲಯ, ಸಿಸಿಟಿವಿ ಕ್ಯಾಮೆರಾ, ನಿರಂತರ ಇಂಟರ್‌ನೆಟ್ ಸಂಪರ್ಕ ಹಾಗೂ ವಿದ್ಯುತ್ ಪೂರೈಕೆ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಆನ್‌ಲೈನ್ ಪರೀಕ್ಷೆಯ ಭದ್ರತೆ ಹಾಗೂ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಸೈಬರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಯಾವುದೇ ರೀತಿಯ ಸೈಬರ್ ಬೆದರಿಕೆ ಅಥವಾ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲಾಗುವುದು. ಪರೀಕ್ಷೆಯ ಸುಸೂತ್ರ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಗಣಕ ಯಂತ್ರಗಳು ಹಾಗೂ ಐಟಿ ಉಪಕರಣಗಳಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಹಾಗೂ ನೆಟ್‌ವರ್ಕ್ ಜ್ಯಾಮಿಂಗ್‌ನಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾನೂನು- ಸುವ್ಯವಸ್ಥೆ ಕಾಪಾಡಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ''''ನಿಷೇಧಿತ ಪ್ರದೇಶ''''ವೆಂದು ಘೋಷಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನಿರ್ದೇಶಿಸಲಾಗಿದೆ. ಈ ನಿಷೇಧಾಜ್ಞೆಯು ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಅನ್ವಯಿಸುವುದಿಲ್ಲ.
ಜಿಲ್ಲೆಯಲ್ಲಿ ಒಟ್ಟು 3 ಪರೀಕ್ಷಾ ಕೇಂದ್ರಗಳಿದ್ದು, 557 ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ:
ತೀವ್ರ ತಪಾಸಣೆ- ನಿಷೇಧಿತ ವಸ್ತುಗಳು:
- - -