ಚನ್ನಪಟ್ಟಣ: ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವಿಳಂಬವಾದ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಕುಟುಂಬಸ್ಥರು ಮೃತದೇಹವನ್ನು ನಗರದ ಪುರ ಪೊಲೀಸ್ ಠಾಣೆ ಮುಂದೆ ಇಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಸೋಮವಾರ ಆಸ್ಪತ್ರೆಯಿಂದ ಮೃತದೇಹವನ್ನು ತಂದು ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯ ಮುಂದಿಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ನಂತರ ಪೊಲೀಸರು ಕುಟುಂಬಸ್ಥರನ್ನು ಮನವೊಲಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಹಾರೋಹಳ್ಳಿ ಸಮೀಪದ ಖಾಸಗಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲು ಕ್ರಮ ಕೈಗೊಂಡರು.ಪೋಟೊ೨೬ಸಿಪಿಟಿ೩: ಚನ್ನಪಟ್ಟಣದ ಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಮೃತನ ಕುಟುಂಬಸ್ಥರು.