ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ

KannadaprabhaNewsNetwork |  
Published : Sep 09, 2026, 03:00 AM IST
ಬೆಳಗಾವಿ  | Kannada Prabha

ಸಾರಾಂಶ

Kannada Prabha News, Belagavi: The City Corporation has introduced a state-of-the-art 'Insta Road Patcher' vehicle, utilizing advanced technology, with the aim of swiftly filling dangerous potholes on city roads and ensuring smooth traffic flow for motorists and citizens, ಕನ್ನಡಪ್ರಭ ವಾರ್ತೆ ಬೆಳಗಾವಿ ನಗರದ ರಸ್ತೆಗಳಲ್ಲಿ ಬಿದ್ದಿರುವ ಅಪಾಯಕಾರಿ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ ವಾಹನ ಸವಾರರು ಹಾಗೂ ನಾಗರಿಕರಿಗೆ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ಮಹಾನಗರ ಪಾಲಿಕೆ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಇನ್‌ಸ್ಟಾ ರೋಡ್ ಪ್ಯಾಚರ್ ವಾಹನವನ್ನು ಪರಿಚಯಿಸಿದೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದ ರಸ್ತೆಗಳಲ್ಲಿ ಬಿದ್ದಿರುವ ಅಪಾಯಕಾರಿ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ ವಾಹನ ಸವಾರರು ಹಾಗೂ ನಾಗರಿಕರಿಗೆ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ಮಹಾನಗರ ಪಾಲಿಕೆ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಇನ್‌ಸ್ಟಾ ರೋಡ್ ಪ್ಯಾಚರ್ ವಾಹನವನ್ನು ಪರಿಚಯಿಸಿದೆ.

ನಗರದ ಪಿಬಿ ರಸ್ತೆಯ ಬಳಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್‌, ಮೇಯರ್‌ ಪ್ರೀತಿ ಕಾಮಕರ್, ಉಪಮಹಾಪೌರ ಹಾಗೂ ಪಾಲಿಕೆ ಆಯುಕ್ತ ಕಾರ್ತಿಕ್.ಎಂ ಅವರ ಉಪಸ್ಥಿತಿಯಲ್ಲಿ ಯಂತ್ರಕ್ಕೆ ಪೂಜೆ ಸಲ್ಲಿಸಿ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಮಳೆಗಾಲದಲ್ಲಿ ನಗರದಲ್ಲಿ ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ತ್ವರಿತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಆಧುನಿಕ ಪ್ಯಾಚ್‌ವರ್ಕ್ ಯಂತ್ರವನ್ನು ತರಲಾಗಿದೆ ಎಂದು ಶಾಸಕ ಅಭಯ ಪಾಟೀಲ್‌ ಹೇಳಿದರು.

ವಿಶೇಷವಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ರಸ್ತೆಗಳಲ್ಲಿರುವ ಗುಂಡಿಗಳನ್ನು ವೇಗವಾಗಿ ಹಾಗೂ ಪರಿಣಾಮಕಾರಿಯಾಗಿ ಮುಚ್ಚಲು ಇನ್‌ಸ್ಟಾ ರೋಡ್ ಪ್ಯಾಚರ್ ಸಹಕಾರಿಯಾಗಲಿದೆ. ಕರ್ನಾಟಕದಲ್ಲೇ ಮೊದಲ ಬಾರಿಗೆ ಇಂತಹ ಆಧುನಿಕ ತಂತ್ರಜ್ಞಾನವನ್ನು ಬೆಳಗಾವಿಯಲ್ಲಿ ಬಳಸಲಾಗುತ್ತಿದೆ ಎಂದು ಎಂದು ತಿಳಿಸಿದರು.ಮೇಯರ್‌ ಪ್ರೀತಿ ಕಾಮಕರ್ ಮಾತನಾಡಿ, ಯಂತ್ರದ ಮೂಲಕ ಕೋಲ್ಡ್ ಡಾಂಬರೀಕರಣ ವಿಧಾನದಲ್ಲಿ ಸ್ಥಳದಲ್ಲೇ ಗುಂಡಿಗಳನ್ನು ಮುಚ್ಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ನಿರಂತರ ಮಳೆಯ ನಡುವೆಯೂ ರಸ್ತೆ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲು ಈ ತಂತ್ರಜ್ಞಾನ ಅನುಕೂಲವಾಗಲಿದೆ ಎಂದರು.

ಸಾಂಪ್ರದಾಯಿಕ ಪ್ಯಾಚ್‌ವರ್ಕ್ ವಿಧಾನಕ್ಕೆ ಹೋಲಿಸಿದರೆ ಕಡಿಮೆ ಸಮಯದಲ್ಲಿ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುವುದರಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರದಲ್ಲಿ ಆಗುವ ತೊಂದರೆಯನ್ನು ಕಡಿಮೆ ಮಾಡಬಹುದು ಎಂಬುದನ್ನು ತಿಳಿಸಿದರು.

ಪಾಲಿಕೆ ಆಯುಕ್ತ ಕಾರ್ತಿಕ್.ಎಂ ಮಾತನಾಡಿ, ಇನ್‌ಸ್ಟಾ ರೋಡ್ ಪ್ಯಾಚರ್ ತಂತ್ರಜ್ಞಾನದಿಂದ ರಸ್ತೆ ದುರಸ್ತಿ ಕಾರ್ಯದಲ್ಲಿ ಸಮಯ ಹಾಗೂ ಶ್ರಮ ಉಳಿತಾಯವಾಗಲಿದೆ. ಗುಂಡಿ ಮುಚ್ಚುವ ಕಾರ್ಯದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಪಾಲಿಕೆ ಬದ್ಧವಾಗಿದ್ದು, ನಗರದ ವಿವಿಧ ಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಯಂತ್ರವನ್ನು ಬಳಸಲಾಗುವುದು ಎಂದು ತಿಳಿಸಿದರು.ಕನ್ನಡಪ್ರಭ ವಾರ್ತೆ ಬೆಳಗಾವಿನಗರದ ರಸ್ತೆಗಳಲ್ಲಿ ಬಿದ್ದಿರುವ ಅಪಾಯಕಾರಿ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ ವಾಹನ ಸವಾರರು ಹಾಗೂ ನಾಗರಿಕರಿಗೆ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ಮಹಾನಗರ ಪಾಲಿಕೆ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಇನ್‌ಸ್ಟಾ ರೋಡ್ ಪ್ಯಾಚರ್ ವಾಹನವನ್ನು ಪರಿಚಯಿಸಿದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವಿಗೆ ಐಟಿ ಕಂಪನಿ ತರಲು ಪ್ರಯತ್ನ
ಭಾರತದ ಭವಿಷ್ಯ ಶಿಕ್ಷಕರ ಕೈಯಲ್ಲಿದೆ