ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸಿದ್ದಾಪುರ- ಚೆಟ್ಟಳ್ಳಿ- ಸುಂಟಿಕೊಪ್ಪ- ಸೋಮವಾರಪೇಟೆ ಈ ರಾಜ್ಯ ಹೆದ್ದಾರಿಯಲ್ಲಿ ನಿತ್ಯ ಬಸ್ಸು, ಲಾರಿ ಸೇರಿದಂತೆ ನೂರಾರು ವಾಹನಗಳು ಸಂಚರಿಸುತ್ತವೆ. ಶ್ರೀದೇವಿ ಕೆರೆಯ ಸಮೀಪವೇ ಹೆದ್ದಾರಿ ಬದಿಯಲ್ಲಿ ಭಾರಿ ಗಾತ್ರದ ಹೊಂಡವಾಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಇದನ್ನು ಮನಗಂಡ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿ ಕೆರೆಯ ಸಮೀಪ ಟೇಪ್ ಅಳವಡಿಸುವ ಈ ಪ್ರದೇಶವು ಅಪಾಯದಲ್ಲಿದೆ ವಾಹನ ಚಾಲಕರು ವಾಹನಗಳನ್ನು ಚಲಾಯಿಸುವಾಗ ನಿಧನವಾಗಿ ಸಂಚರಿಸಲು ಈ ಮೂನ್ಸೂಚನೆ ನೀಡಿದ್ದಾರೆ.
ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಕಾರ್ಯವೈಖರಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.. ಆರೋಗ್ಯ ತಪಾಸಣಾ ಶಿಬಿರ ಸಂಪನ್ನ:ಮಡಿಕೇರಿ: ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ ನೇತೃತ್ವದಲ್ಲಿ ಸೋಮವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಿ.ವಿ.ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ ಸಾಂಕ್ರಾಮಿಕ ಮತ್ತು ಆಸಾಂಕ್ರಾಮಿಕ ಕಾಯಿಲೆ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಪೌಷ್ಟಿಕ ಆಹಾರ ಸೇವನೆಯ ಮಹತ್ವ, ರಕ್ತ ಹೀನತೆ ಮತ್ತು ನಿವಾರಣೆ, ಗರ್ಭಿಣಿ, ಬಾಣಂತಿ ಆರೈಕೆ, ಲಸಿಕಾ ಕಾರ್ಯಕ್ರಮ, ಮಾನಸಿಕ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಗಾಳಿಬೀಡು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಣಿ ಮುತ್ತಣ್ಣ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ವಂದಿಸಿದರು.