ಪುರಸಭೆ ಅಧ್ಯಕ್ಷೆ ಮೀನಾಕ್ಷಿ ವೆಂಕಟೇಶ್, ಮುಖ್ಯಾಧಿಕಾರಿ ನೇತೃತ್ವದಲ್ಲಿ ಕ್ರಮ । ಅನಧಿಕೃತ ಗೂಡುಗಳ ತೆರವಿಗೆ 30 ವರ್ಷಗಳಿಂದ ಯತ್ನಕನ್ನಡಪ್ರಭ ವಾರ್ತೆ ಬೇಲೂರು
ಸುಮಾರು ೩೦ ವರ್ಷಗಳಿಂದಲೂ ಮುಸುಕಿನ ಗುದ್ದಾಟದಲ್ಲಿ ಸಾಗುತ್ತಿದ್ದ ಕೋಳಿ ಅಂಗಡಿಗಳ ತೆರವು ಕಾರ್ಯಾಚರಣೆ ಹಾಗೂ ಸಾರ್ವಜನಿಕರು ಮತ್ತು ದಲಿತ ಸಂಘಟನೆಗಳ ಒತ್ತಾಸೆಯ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದ ಮುಂಭಾಗದ ಅಂಬೇಡ್ಕರ್ ಸಮುದಾಯ ಭವನದ ಪಕ್ಕದಲ್ಲಿ ಅನಧಿಕೃತವಾಗಿ ಇದ್ದ ಕೋಳಿ ಅಂಗಡಿಗಳನ್ನು ತೆರವುಗೊಳಿಸುವಂತೆ ಶಾಸಕರ ನೇತೃತ್ವದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಭೆಯಲ್ಲಿ ದಲಿತ ಮುಖಂಡರು ಕೋಳಿ ಅಂಗಡಿಗಳನ್ನು ಕೂಡಲೇ ತೆರವುಗೊಳಿಸದಿದ್ದರೆ ಪುರಸಭೆ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆ ಶಾಸಕರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಮಂಗಳವಾರ ಸಂಜೆಯೊಳಗೆ ಅಲ್ಲಿರುವ ಅನಧಿಕೃತ ಕೋಳಿ ಅಂಗಡಿಗಳ ತೆರವುಗೊಳಿಸಬೇಕಾಗಿ ಸೂಚಿಸಿದ ಹಿನ್ನೆಲೆ ಪುರಸಭೆ ಅಧ್ಯಕ್ಷೆ ಮೀನಾಕ್ಷಿ ವೆಂಕಟೇಶ್ ಹಾಗೂ ಮುಖ್ಯಾಧಿಕಾರಿ ಪೊಲೀಸ್ ಇಲಾಖೆ ಸಹಕಾರದೊಂದಿಗೆ ದಿಢೀರ್ ದಾಳಿ ನಡೆಸಿ ಅಲ್ಲಿದ್ದ ಕೋಳಿ ಅಂಗಡಿಗಳ ಬಾಗಿಲು ಹಾಕಿಸಿ ಬೀಗಮುದ್ರೆ ಹಾಕಿಸಲಾಯಿತು.
ಮಾತಿನ ಚಕಮಕಿ:ಅಧಿಕಾರಿಗಳು ಆಗಮಿಸಿದ ಸಂದರ್ಭದಲ್ಲಿ ಅಂಗಡಿಗಳ ಮಾಲೀಕರ ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಪುರಸಭೆಯಿಂದ ಯಾವುದಾದರೂ ಕೋಳಿ ಅಂಗಡಿಗೆ ಅನುಮತಿ ನೀಡಿದ್ದರೆ ದಾಖಲೆಗಳನ್ನು ತನ್ನಿ ಇಲ್ಲದಿದ್ದರೆ ಕಾನೂನು ಹೋರಾಟ ಎದುರಿಸಿ ಎಂದರು.
ಪಟಾಕಿ ಸಿಡಿಸಿ ಸಿಹಿ ಹಂಚಿದ ದಲಿತ ಸಂಘಟನೆಗಳು:
ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ ಮಂಜುನಾಥ್, ‘ಅಂಬೇಡ್ಕರ್ ಆಶಯದಂತೆ ಸಂವಿಧಾನದ ಉಳಿವಿಗಾಗಿ ಕ್ರಮ ಕೈಗೊಂಡ ದಿಟ್ಟ ಮಹಿಳೆಯರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಸುಮಾರು ೩೦ ವರ್ಷ ಇತಿಹಾಸದಲ್ಲಿ ಕೋಳಿ ಅಂಗಡಿ ತೆರವುಗೊಳಿಸುವ ವಿಚಾರದಲ್ಲಿ ಕೇವಲ ಕಣ್ಣೊರೆಸುವ ನಾಟಕವಾಡುತ್ತಿದ್ದರು. ಆದರೆ ಶಾಸಕ ಎಚ್.ಕೆ.ಸುರೇಶ್, ಪುರಸಭೆ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ನೇತೃತ್ವದಲ್ಲಿ ಸಂಪೂರ್ಣವಾಗಿ ತೆರವುಗೊಳಿಸಿದ್ದಾರೆ. ಇನ್ನು ಮುಂದೆ ಯಾರೇ ಅಂಗಡಿಗಳನ್ನು ತೆರಯಲು ಮುಂದಾದರೆ ದಲಿತ ಸಂಘಟನೆಗಳು ಹಾಗೂ ಸಾರ್ವಜನಿಕರ ನೇತೃತ್ವದಲ್ಲಿ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಬದಲಿ ವ್ಯವಸ್ಥೆ ಕಲ್ಪಿಸುವಂತೆ ಮನವಿ