ಅವಧಿ ಮೀರಿ ಬಿಲ್‌ ಬಾಕಿ ಇದ್ದರೆ ವಿದ್ಯುತ್‌ ಕಡಿತ: ಜಿ. ಶೀಲಾ

KannadaprabhaNewsNetwork |  
Published : Dec 06, 2024, 09:01 AM IST
36 | Kannada Prabha

ಸಾರಾಂಶ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್‌ ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್‌ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್‌ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್‌ ದಾರರು ಹೊಂದಿರುತ್ತಾರೆ”.

ಕನ್ನಡಪ್ರಭ ವಾರ್ತೆ ಮೈಸೂರು

ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್ ಕಡಿತಗೊಳಿಸಲು ಸೆಸ್ಕ್ ತೀರ್ಮಾನಿಸಿದೆ.

ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್‌ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿದ್ಯುತ್ ಕಡಿತಗೊಳಿಸಲು ಸೆಸ್ಕ್‌ ನಿರ್ಧರಿಸಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್‌ ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್‌ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್‌ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್‌ ದಾರರು ಹೊಂದಿರುತ್ತಾರೆ”.

ಅಲ್ಲದೇ ನಿಯಮ 2.11ರ ಪ್ರಕಾರ “ಬಿಲ್‌ ವಿತರಿಸಿದ ಬಳಿಕ 15 ದಿನಗಳ ಅವಧಿ ಬಿಲ್‌ ಪಾವತಿಗೆ ಅಂತಿಮ ಗಡುವಾಗಿರುತ್ತದೆ.” ಗ್ರಾಹಕರಿಗೆ ನೀಡುವ ಬಿಲ್‌ ನ ಹಿಂಬದಿಯ ಸೂಚನೆ 1ರಲ್ಲಿ ನಿಗದಿತ ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಈ ಬಿಲ್‌ ಅನ್ನೇ ವಿದ್ಯುತ್‌ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸಬೇಕು ಎಂದು ನಮೂದಿಸಲಾಗಿದೆ ಹಾಗೂ ಹಿಂದಿನ ಬಾಕಿಗೆ ವಾಯ್ದೆ ದಿನಾಂಕ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ತುರ್ತು ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳು, ಕುಡಿಯುವ ನೀರು, ಬೀದಿ ದೀಪಗಳ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಪ್ರವರ್ಗದ ವಿದ್ಯುತ್‌ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ತಮ್ಮ ಸ್ಥಾವರಗಳ ವಿದ್ಯುತ್‌ ಶುಲ್ಕ ಬಾಕಿಯನ್ನು 3 ದಿನದೊಳಗೆ ಸೆಸ್ಕ್‌ಅಧಿಕೃತ ನಗದು ಕೌಂಟರ್, ಆನ್‌ ಲೈನ್‌ ಮೂಲಕ ಪಾವತಿಸುವಂತೆ ಕೋರಲಾಗಿದೆ. ಅಲ್ಲದೆ, ನಿಗದಿತ ದಿನದೊಳಗೆ ವಿದ್ಯುತ್‌ ಶುಲ್ಕ ಬಾಕಿ ಪಾವತಿಸದಿದ್ದಲ್ಲಿ ಡಿ.9 ರಂದು ಸಾಮೂಹಿಕವಾಗಿ ವಿದ್ಯುತ್ ಕಡಿತಗೊಳಿಸುವ ಅಭಿಯಾನದ ಮೂಲಕ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ ತಿಳಿಸಿದ್ದಾರೆ.

‘ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸ್ಥಾವರಗಳಿಗೆ ನಿಯಮಾನುಸಾರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಹೀಗಾಗಿ, ವಿದ್ಯುತ್‌ ‌ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ಸರ್ಕಾರಿ ಇಲಾಖೆಗಳು ತುರ್ತಾಗಿ ತಮ್ಮ ವಿದ್ಯುತ್‌ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕು.’

- ಜಿ. ಶೀಲಾ, ವ್ಯವಸ್ಥಾಪಕ ನಿರ್ದೇಶಕಿ, ಸೆಸ್ಕ್

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ