ಅಧಿಕಾರ ಶಾಶ್ವತವಲ್ಲ, ಇದ್ದಾಗ ಕೆಲಸ ಮಾಡುವ ಜಾಯಮಾನ ನನ್ನದು

KannadaprabhaNewsNetwork |  
Published : Feb 06, 2025, 11:45 PM IST
ಫೋಟೋ 6hlk1: ಮಲ್ಲೇನಹಳ್ಳಿ ಗ್ರಾಮದ ಹತ್ತಿರ ಒಂದು ಕೋಟಿ ರೂ.ವೆಚ್ಚದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಭೂಮಿಪೂಜೆ. | Kannada Prabha

ಸಾರಾಂಶ

ಮಲ್ಲೇನಹಳ್ಳಿ ಗ್ರಾಮದ ಹತ್ತಿರ 1 ಕೋಟಿ ರು.ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.

1 ಕೋಟಿ ರು.ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಡಾ.ಚಂದ್ರಪ್ಪ ಭೂಮಿಪೂಜೆಕನ್ನಡಪ್ರಭ ವಾರ್ತೆ ಹೊಳಲ್ಕೆರೆ

ಅಧಿಕಾರ ಶಾಶ್ವತವಲ್ಲ, ಇದ್ದಾಗ ಎಲ್ಲರ ನೆನಪಿನಲ್ಲಿ ಉಳಿಯುವಂತ ಕೆಲಸ ಮಾಡಬೇಕೆಂಬ ಜಾಯಮಾನ ನನ್ನದು ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹತ್ತಿರ 1 ಕೋಟಿ ರು. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.

ರೈತರಿಗೆ ನೀರು ಮತ್ತು ಕರೆಂಟ್‌ ಎರಡೂ ಅತಿ ಮುಖ್ಯವಾಗಿರುವುದರಿಂದ ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ 500 ಕೋಟಿ ರು. ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಿಸಲಾಗುತ್ತಿದೆ.

ಜೋಗ್‍ ಫಾಲ್ಸ್‌ನಿಂದ ಇಲ್ಲಿಗೆ ನೇರವಾಗಿ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ಇನ್ನೂ ನೂರು ವರ್ಷಗಳ ಕಾಲ ವಿದ್ಯುತ್ ಸಮಸ್ಯೆ ರೈತರನ್ನು ಕಾಡುವುದಿಲ್ಲ ಎಂದರು.

ಹಿರಿಯೂರಿನ ವಾಣಿವಿಲಾಸ ಸಾಗರದ ಮಧ್ಯೆ 40 ಅಡಿ ಆಳದಲ್ಲಿ ಪಿಲ್ಲರ್ ಎತ್ತಿ ಮೋಟಾರ್ ಕೂರಿಸಿ 67 ಕೋಟಿ ರು.ವೆಚ್ಚದಲ್ಲಿ ಫಿಲ್ಟರ್ ಅಳವಡಿಸಿ ತಾಲೂಕಿನ ಪ್ರತಿ ಹಳ್ಳಿಯಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಇನ್ನು ನಾಲ್ಕೈದು ತಿಂಗಳಲ್ಲಿ ಪೂರೈಕೆಯಾಗಲಿದೆ ಎಂದರು.

ಕ್ಷೇತ್ರಾದ್ಯಂತ ಕೆರೆ ತುಂಬಿಸುವ ಯೋಜನೆ, ಗುಣಮಟ್ಟದ ಆಸ್ಪತ್ರೆ, ಶಾಲಾ-ಕಾಲೇಜು, ಸಿ.ಸಿ.ರಸ್ತೆಗಳನ್ನು ನಿರ್ಮಿಸಿದ್ದೇನೆ. ವೈದ್ಯರು ಬೇರೆ ಊರಿನಿಂದ ಬರುವುದು ಕಷ್ಟವಾಗುತ್ತದೆ ಎಂದು ವಸತಿ ಗೃಹಗಳನ್ನು ಕಟ್ಟಿಸಿದ್ದೇನೆ. ಯಾರಿಂದಲೂ ಏನನ್ನು ಹೇಳಿಸಿಕೊಳ್ಳದೆ ಎಲ್ಲಿ ಏನು ಅಗತ್ಯವಿದೆ ಎನ್ನುವುದನ್ನು ಮನಗಂಡು ಹಗಲು-ರಾತ್ರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು.

ಸಾಸಲು ಹಳ್ಳದಿಂದ ಹಿರೇಬೆನ್ನೂರು ವೃತ್ತದವರೆಗಿನ ರಸ್ತೆಗೆ 100 ಕೋಟಿ ರು. ನೀಡಿದ್ದೇನೆ. ಸಾಸ್ವೆಹಳ್ಳಿ ಬಳಿ ಸೇತುವೆಗೆ5 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಹೊಳಲ್ಕೆರೆಯಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಿಸಿದ್ದೇನೆ. ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಬಡ ರೋಗಿಗಳಿಗೆ ಅನುಕೂಲವಾಗಲಿ ಎನ್ನುವುದು ನನ್ನ ಉದ್ದೇಶ ಎಂದರು.

ಈ ವೇಳೆ ಹೊಳಲ್ಕೆರೆ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಸಿದ್ದೇಶ್, ಶರಣಪ್ಪ, ಸಿದ್ದೇಶಪ್ಪ, ಕುಮಾರ್, ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ನವೀನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂಗಡಗಿ, ನಾಲತವಾಡಗೆ ಪಿಯು ಕಾಲೇಜು ಪರಿಶೀಲಿಸಿ ಮಂಜೂರು
ಲಗಾನಿ ಹೆಸರಿನಲ್ಲಿ ಕಬ್ಬು ಬೆಳೆಗಾರರ ಲೂಟಿ