ನಾಮಿನಿ ಸದಸ್ಯರಿಗೆ ಅಭಿನಂಧನೆ । ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ ಮಂಜೇಗೌಡ
ಕಾಂಗ್ರೆಸ್‌ನಲ್ಲಿ ನಿಷ್ಠೆಯಿಂದ ಕೆಲಸ ಮಾಡಿದವರನ್ನು ಪಕ್ಷ ಗುರುತಿಸಿ ನಾಲ್ವರು ನಾಮಿನಿ ಸದಸ್ಯರನ್ನು ಅವಿರೋಧ ಆಯ್ಕೆ ಮಾಡಿರುವುದೇ ಸ್ಪಷ್ಟ ನಿದರ್ಶನ ಎಂದು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ ಮಂಜೇಗೌಡ ಹೇಳಿದರು.ಮಂಗಳವಾರ ಸಿಡಿಎ ಕಚೇರಿಯಲ್ಲಿ ಪ್ರಾಧಿಕಾರಕ್ಕೆ ನಾಮಿನಿ ಸದಸ್ಯರಾಗಿ ಅವಿರೋಧ ಆಯ್ಕೆಯಾದ ಹೇಮಾವತಿ ಸದಾಶಿವ, ಎಚ್.ವೈ ಮೋಹನ್‌ಕುಮಾರ್, ನೂರ್ ಮಹಮ್ಮದ್, ಸಿ.ಸಿ ಮಂಜುನಾಥ್ ಅವರನ್ನು ಅಭಿನಂದಿಸಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಂಚಾಯತ್‌ರಾಜ್ ಸಚಿವ ಭೈರತಿ ಸುರೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಶಾಸಕ ಎಚ್.ಡಿ. ತಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ ಅಂಶುಮಂತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎಲ್. ಶಂಕರ್, ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಸೇರಿದಂತೆ ಎಲ್ಲಾ ನಾಯಕರ ಅಭಿಪ್ರಾಯ ಪಡೆದು ಪ್ರಾಧಿಕಾರದ ಸದಸ್ಯರಾಗಿ ನಾಮನಿರ್ದೇಶನ ಸದಸ್ಯರಾಗಿ ನೇಮಕ ಮಾಡಲಾಗಿದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ. ಡಿ.ಎಲ್ ವಿಜಯ್‌ಕುಮಾರ್, ಎಂ.ಎಲ್ ಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಎ.ಎನ್. ಮಹೇಶ್ ಸೇರಿದಂತೆ ಎಲ್ಲಾ ನಾಯಕರು ಸ್ಪಂದಿಸಿದ್ದಾರೆ ಎಂದರು.ನಗರಸಭೆ ಮತ್ತು ಪ್ರಾಧಿಕಾರದ ನಿಯಮ ಮೀರಿ ಗೃಹ ನಿರ್ಮಾಣಕಾರ್ಯ ಕೂಡಲೇ ನಿಲ್ಲಿಸಬೇಕು. ಜತೆಗೆ ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆಯಬೇಕೆಂದು. ಪಾರ್ಕ್ಒತ್ತುವರಿ ಮಾಡಿದ್ದರೆ ತೆರವು ಮಾಡಲು ಸೂಚಿಸಿದರು.ನಗರದ ನಾಗರಿಕರು ಅನಧಿಕೃತ ಕಟ್ಟಡ ನಿರ್ಮಾಣ ಮಾಡಿದ್ದರೆ ಮುಂದೆ ಅದರ ಪರಿಣಾಮ ಎದುರಿಸಬೇಕು ಎಂದು ಎಚ್ಚರಿಸಿದರು.ಅಟಲ್ ಬಿಹಾರಿ ವಾಜಪೇಯಿ ಮತ್ತು ಇಂದಾವರ ಲೇಔಟ್ ಅಭಿವೃದ್ಧಿ ಪಡಿಸಿ ಶಾಸಕರೊಂದಿಗೆ ಚರ್ಚಿಸಿ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚು ನಿವೇಶನಗಳ ಅವಶ್ಯಕತೆ ಇದ್ದು, ಶಾಸಕರೊಂದಿಗೆ ಚರ್ಚಿಸಿ ಬೃಹತ್ ಲೇಔಟ್ ನಿರ್ಮಾಣಕ್ಕೆ ನೀಲಿ ನಕ್ಷೆ ತಯಾರಿಸಲು ನಿರ್ಧರಿಸಲಾಗಿದೆ ಎಂದರು.ಫೋಟೋಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶಕರಾಗಿ ಆಯ್ಕೆಯಾದ ನಾಲ್ವರು ಸದಸ್ಯರನ್ನು ಸಿಡಿಎ ಅಧ್ಯಕ್ಷ ಮಂಜೇಗೌಡ ಅಭಿನಂದಿಸಿದರು.