ಪವರ್ ಲಿಫ್ಟಿಂಗ್‌: ಶಿವರುದ್ರಪ್ಪಗೆ ಚಿನ್ನದ ಪದಕ

KannadaprabhaNewsNetwork | Published : Oct 31, 2023 1:15 AM

ಸಾರಾಂಶ

9ನೇ ಬಾರಿಗೆ ಚಿನ್ನದ ಪದಕ ಪಡೆದಿರುವುದು ವಿಶೇಷ.
ಭದ್ರಾವತಿ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರಿಗಾಗಿ ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನಗರದ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಉಪನ್ಯಾಸಕ ಡಾ. ಶಿವರುದ್ರಪ್ಪ ಚಿನ್ನದ ಪದಕ ಪಡೆದುಕೊಂಡಿದ್ದಾರೆ. 93 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಶಿವರುದ್ರಪ್ಪ ಆಯ್ಕೆಯಾಗಿದ್ದಾರೆ. ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ 9ನೇ ಬಾರಿಗೆ ಚಿನ್ನದ ಪದಕ ಪಡೆದಿರುವುದು ವಿಶೇಷ. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ನಗರದ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು, ಕಾಲೇಜು ಆಡಳಿತ ಮಂಡಳಿ, ಗಣ್ಯರು ಅಭಿನಂದಿಸಿದ್ದಾರೆ. - - - -ಡಿ30ಬಿಡಿವಿಟಿ4:

Share this article