ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಪಾಲಹಳ್ಳಿಯಲ್ಲಿ ತಿರುಮಲ ವೆಂಕಟರಮಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಮುದಾಯ ಭವನ ಉದ್ಘಾಟನೆ ಹಾಗೂ ವೇದಿಕೆಯಲ್ಲಿ ದೀಪ ಬೆಳಗಿಸಿ ಮಾತನಾಡಿದರು.
ಜನ ಸಾಮಾನ್ಯರ ಅಗತ್ಯ ಸೇವೆಗಳ ಮೇಲೆ ರಾಜ್ಯ ಸರ್ಕಾರ ವಿಪರೀತ ತೆರಿಗೆ ವಸೂಲಿ ಮಾಡಿ, ಮಹಿಳೆಯರಿಗೆ ಕೇವಲ 2 ಸಾವಿರ ರು. ನೀಡುತ್ತಿದ್ದಾರೆ. ಒಂದು ವೇಳೆ ನಾನು ಇಷ್ಟೊಂದು ತೆರಿಗೆ ವಸೂಲಿ ಮಾಡಿದ್ದರೆ ಪ್ರತಿಯೊಬ್ಬರಿಗೂ ತಲಾ 5 ಸಾವಿರ ರು. ನೀಡುತ್ತಿದ್ದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಹಿತರಕ್ಷಣೆಗೆ ನೀಡಿದ್ದ ಆದ್ಯತೆ ಸ್ಮರಿಸಿದ ಅವರು, ನಾನು ಮುಖ್ಯಮಂತ್ರಿ ಆದ ಸಮಯದಲ್ಲಿ ಸುಮಾರು 25 ಸಾವಿರ ಕೋಟಿ ರು. ರೈತರ ಸಾಲಮನ್ನಾ ಮಾಡುವ ಮೂಲಕ ಅನ್ನದಾತನ ಸಂಕಷ್ಟಕ್ಕೆ ಸ್ಪಂದಿಸಿದ್ದೆ ಎಂದರು.
ಮತದಾರರು ಮುಂದಿನ ಬಾರಿ ಪೂರ್ಣ ಪ್ರಮಾಣದ ಸರ್ಕಾರ ರಚಿಸಲು ತಮಗೆ ಅವಕಾಶ ನೀಡಿದರೆ ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುಸುತ್ತೇವೆ ಎಂದು ಭರವಸೆ ನೀಡಿದರು.
ದೇವಾಲಯದ ಸಮಿತಿ ಅಧ್ಯಕ್ಷ ಪಿ.ಎಚ್ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಚ್.ಟಿ.ಮಂಜು, ಎಂಎಲ್‌ಸಿ ವಿವೇಕಾನಂದ, ಜಿಪಂ ಮಾಜಿ ಅಧ್ಯಕ್ಷ ಎಸ್.ಲಿಂಗಣ್ಣ, ರಾಜ್ಯ ಕೃಷಿ ಸಮಾಜದ ಮಾಜಿ ಅಧ್ಯಕ್ಷ ಪಿ.ಗಿರಿಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಪಾಲಹಳ್ಳಿ ಮುಕುಂದ ಸೇರಿದಂತೆ ದೇವಸ್ಥಾನದ ಭಕ್ತರು, ಯಜಮಾನರು ಹಾಗೂ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.