ಕನ್ನಡಪ್ರಭ ವಾರ್ತೆ ಅಥಣಿ
ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ಎಸ್ಎಂಎಸ್ ಮಹಾವಿದ್ಯಾಲಯದ ಆವರಣದಲ್ಲಿ ತಾಲೂಕು ಆಡಳಿತ, ಪತಂಜಲಿ ಯೋಗ ಸಮಿತಿ ಹಾಗೂ ವಿವಿಧ ಶಾಲಾ ಕಾಲೇಜುಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯೋಗ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ, ಪ್ರತಿದಿನ ಒಂದು ಗಂಟೆ ನಮ್ಮ ದೇಹ ಮತ್ತು ಮನಸ್ಸಿನ ಆರೋಗ್ಯಕ್ಕಾಗಿ ಮೀಸಲೀಡಬೇಕು. ಪ್ರತಿದಿನ ತಪ್ಪದೇ ಯೋಗ ಅಭ್ಯಾಸ ರೂಡಿಸಿಕೊಳ್ಳುವ ಮೂಲಕ ಆರೋಗ್ಯವೇ ಭಾಗ್ಯ ಎಂಬ ಸಂಪತ್ತು ಕಾಪಾಡಿಕೊಳ್ಳಬೇಕು. ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ದಿವ್ಯ ಔಷಧಿಯಾಗಿದೆ. ಪ್ರತಿದಿನ ಯೋಗವನ್ನು ರೂಡಿಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ಕಟ್ಟಲು ಕೈಜೋಡಿಸಬೇಕು ಎಂದು ಹೇಳಿದರು.
ಅಂತಾರಾಷ್ಟ್ರೀಯ ಯೋಗಪಟು ಭವರ ಲಾಲ್ ಆರ್ಯ ಮಾತನಾಡಿ, ಮಾನವನ ದೇಹ ಮತ್ತು ಮನಸ್ಸಿಗೆ ಯೋಗ ಶ್ರೇಷ್ಠವಾದ ಉಡುಗೊರೆ. ಪತಂಜಲಿ ಯೋಗ ಪೀಠದ ಬಾಬಾ ರಾಮದೇವ್ ರವರ ಕನಸಿನಂತೆ ಯೋಗ ವಿಶ್ವಮಯವಾಗಬೇಕು. ಆರೋಗ್ಯವಂತ ಮತ್ತು ಸದೃಢ ಸಮಾಜ ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗವನ್ನು ರೂಡಿಸಿಕೊಂಡು, ಸಾತ್ವಿಕ ಆಹಾರ, ಶುದ್ಧವಾದ ನೀರು ಮತ್ತು ಆಮ್ಲಜನಕ ಸೇವನೆ ಮಾಡಿದಾಗ ಆರೋಗ್ಯವಂತ ಸಮಾಜ ಕಟ್ಟಲು ಸಾಧ್ಯವಿದೆ ಎಂದು ಹೇಳುವ ಮೂಲಕ ಯೋಗ ಪ್ರಾತ್ಯಕ್ಷತೆ ಮಾರ್ಗದರ್ಶನ ನೀಡಿದರು.ಈ ವೇಳೆ ಉದ್ಯಮಿ, ಸಮಾಜಸೇವಕ ರಫೀಕ್ ಡಾಂಗೆಗೆ ಸಮಾಜ ಸೇವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯೋಗ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಅಥಣಿ ಪಟ್ಟಣದ ಶ್ರೀ ಶಿವಯೋಗಿ ಮುರುಘೇಂದ್ರ ಸ್ವಾಮಿ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ತಾಲೂಕುಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಮುಗಿದ ನಂತರ ಶಾಸಕ ಲಕ್ಷ್ಮಣ ಸವದಿ ಉಪಹಾರದ ವ್ಯವಸ್ಥೆ ಮಾಡಿದ್ದರು.
ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಜನರು ದಾವಣಗೆರೆ ಬೆಣ್ಣೆ ದೋಸೆ ಸವಿದು ಶಾಸಕರ ಕಾರ್ಯ ಪ್ರಶಂಶಿಸಿದರು.