ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
1 ಸಾವಿರಕ್ಕೂ ಅಧಿಕ ಮಕ್ಕಳು ಸಾಮೂಹಿಕ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಯೋಗ ತರಬೇತುದಾರರು ಸೂರ್ಯ ನಮಸ್ಕಾರ, ಪ್ರಾಣಾಯಾಮ ಸೇರಿದಂತೆ ಸಹಜ ಯೋಗಾಸನ ಭಂಗಿಗಳನ್ನು ಪ್ರದರ್ಶಿಸಲು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಯೋಗಾಭ್ಯಾಸ ಆರೋಗ್ಯ ವೃದ್ಧಿ ಪೂರಕವಾಗಿದ್ದು, ಇಂದಿನ ಕಾಲಘಟ್ಟದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ಪ್ರಸಕ್ತ ವರ್ಷ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯದಲ್ಲಿ ಇಡೀ ಜಗತ್ತಿನಾದ್ಯಂತ ಯೋಗ ದಿನಾಚರಣೆಯನ್ನು ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಇಂತಹ ಅದ್ಭುತ ಪರಂಪರೆಯ ತವರು ಭಾರತ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದರು.ಶಾಲಾ ಪ್ರಾಂಶುಪಾಲ ಧನಂಜಯ್ ಯೋಗ ದಿನಾಚರಣೆಯ ಮಹತ್ವ ಕುರಿತು ವಿವರಿಸಿದರು. ಕೆಲ ವಿದ್ಯಾರ್ಥಿಗಳು ಯೋಗ ದಿನದ ಪರಂಪರೆಯನ್ನು ಭಾಷಣದ ಮೂಲಕ ಪ್ರಸ್ತುತಪಡಿಸಿದರು. ಗೌರ್ನಿಂಗ್ ಕೌನ್ಸಿಲ್ ಸದಸ್ಯ ಉತ್ತಮ್ ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಜೆ.ಆರ್.ರಾಕೇಶ್, ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ನಿಕಟಪೂರ್ವ ಅಧ್ಯಕ್ಷ ಡಾ.ಶ್ರೀನಿವಾಸರೆಡ್ಡಿ, ಪ್ರೌಢಶಾಲೆ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್ ಸೇರಿದಂತೆ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.