ಭಾರತ ದೇಶದ ವೈದ್ಯಕೀಯ ಪದ್ಧತಿಯಲ್ಲಿ ಯೋಗವೂ ಒಂದಾಗಿದೆ. ಆರೋಗ್ಯವನ್ನು ಉತ್ತಮವಾಗಿಕೊಳ್ಳಲು ಪ್ರತಿದಿನ ಕನಿಷ್ಠ 20 ನಿಮಿಷಗಳ ಕಾಲ ಯೋಗ, ಧ್ಯಾನದಲ್ಲಿ ನಿತರಾಗಿರಬೇಕು ಎಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶೆ ಸೌಭಾಗ್ಯ ಭುಷೇರ್ ಹೇಳಿದ್ದಾರೆ.
- ಚನ್ನಗಿರಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಯೋಗ ದಿನಾಚರಣೆ
- - -
ಕನ್ನಡಪ್ರಭ ವಾರ್ತೆ ಚನ್ನಗಿರಿ
ಭಾರತ ದೇಶದ ವೈದ್ಯಕೀಯ ಪದ್ಧತಿಯಲ್ಲಿ ಯೋಗವೂ ಒಂದಾಗಿದೆ. ಆರೋಗ್ಯವನ್ನು ಉತ್ತಮವಾಗಿಕೊಳ್ಳಲು ಪ್ರತಿದಿನ ಕನಿಷ್ಠ 20 ನಿಮಿಷಗಳ ಕಾಲ ಯೋಗ, ಧ್ಯಾನದಲ್ಲಿ ನಿತರಾಗಿರಬೇಕು ಎಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶೆ ಸೌಭಾಗ್ಯ ಭುಷೇರ್ ಹೇಳಿದರು.
ಅವರು ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಮತ್ತು ತಾಲೂಕು ಆಡಳಿತ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ದೇಶದ ಪ್ರಾರಂಪರಿಕ ಯೋಗ ಪದ್ಧತಿಯನ್ನು ಇಂದು ಪಾಶ್ಚಿಮಾತ್ಯ ದೇಶಗಳಲ್ಲಿ ಅಳವಡಿಸಿಕೊಂಡು ವಿಶ್ವಾದ್ಯಂತ ಯೋಗ ದಿನವಯನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿದಿನ ಜೀವನದ ಜಂಜಾಟದಲ್ಲಿ ಸಿಲುಕಿರುವ ಜನರು ಬೆಳಗ್ಗೆಯ ಸಮಯದಲ್ಲಿ ಯೋಗ, ಧ್ಯಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರೆ ಉತ್ತಮ ಆರೋಗ್ಯ ನಿಮ್ಮದಾಗಲಿದೆ ಎಂದರು.
ತಹಸೀಲ್ದಾರ್ ಎನ್.ಜೆ. ನಾಗರಾಜ್ ಮಾತನಾಡಿ, ಯೋಗ ಮತ್ತು ವ್ಯಾಮಾಯವು ಮನಸ್ಸು ಮತ್ತು ಆರೋಗ್ಯವನ್ನು ಸದೃಢವಾಗಿ ಇಡಲಿದೆ. ಪ್ರತಿಯೊಬ್ಬರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಉತ್ತಮ ಮಾರ್ಗವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಜ್ರೇಶ್, ಡಿವೈಎಸ್ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ, ತಾಪಂ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಪುರಸಭೆ ಮುಖ್ಯಾಧಿಕಾರಿ ಜೆ.ವಿ. ಮಂಜುನಾಥ್, ಸರಿತ, ರಾಘವೇಂದ್ರ, ಶ್ವೇತಾ, ಪತಾಂಜಲಿ ಯೋಗ ಕೇಂದ್ರದ ಅಧ್ಯಕ್ಷ ವಸಂತ ಕುಮಾರ್, ಗೌಡ್ರು ಜಯಣ್ಣ, ದೈವ ಸಂಸ್ಕೃತಿ ಪ್ರತಿಷ್ಠಾನ ಅಧ್ಯಕ್ಷ ಬೂದಿಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
- - -
-21ಕೆಸಿಎನ್ಜಿ1:
ಚನ್ನಗಿರಿಯಲ್ಲಿ ನಡೆದ ವಿಶ್ವ ಯೋಗ ದಿನ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಸೌಭಾಗ್ಯ ಭುಷೇರ್ ಉದ್ಘಾಟಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.