ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಜಾಥಾ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಯೋಗ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯ ಹೊಂದಿದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗಾಭ್ಯಾಸ ಮಾಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗ ವಾಗಿ ಗುರುವಾರ ನಗರದ ತಾಲೂಕು ಕಚೇರಿ ಆವರಣದಲ್ಲಿ ಯೋಗ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.ಪ್ರತಿನಿತ್ಯ ಯೋಗ ಮಾಡುವುದರಿಂದ ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಕ ಯೋಗ ಕ್ಷೇಮಕ್ಕೆ ಅಸಂಖ್ಯಾತ ಪ್ರಯೋಜನ ನೀಡುತ್ತದೆ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಯೋಗ ಮಹತ್ವ ದ್ದಾಗಿದೆ. ಸಾರ್ವಜನಿಕರಲ್ಲಿ ಯೋಗದ ಮಹತ್ವ ಕುರಿತು ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವುದೇ ನಮ್ಮ ಉದ್ದೇಶ ಎಂದು ಹೇಳಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ ಮಾತನಾಡಿ, ಯೋಗ ನಡಿಗೆ ನಮ್ಮ ಜೀವನದ ಒಂದು ಭಾಗ ವಾಗಿದ್ದು, ಇದರಿಂದ ಎಲ್ಲಾ ಸಾಂಕ್ರಾಮಿಕವಲ್ಲದ ಕಾಯಿಲೆಗಳನ್ನು ದೂರ ಮಾಡಬಹುದು, ಯೋಗದ ನಿಯಮಿತ ಅಭ್ಯಾಸದಿಂದ ಶಿಸ್ತುಬದ್ಧ ಮತ್ತು ಸಂತೋಷದ ಜೀವನ ನಡೆಸಲು ಸಾಧ್ಯವಾಗುತ್ತದೆ. ಮಾನಸಿಕ ಒತ್ತಡದಿಂದ ದೂರ ಉಳಿದು ರಕ್ತದೊತ್ತಡ ಕಡಿಮೆ ಮಾಡಿ ಆರೋಗ್ಯವಂತರಾಗಿರಲು ಸಹಕರಿ ಸುತ್ತದೆ. ಪ್ರತಿಯೊಬ್ಬರು ದಿನನಿತ್ಯ ಯೋಗಾಭ್ಯಾಸ ಮಾಡಿ ಆರೋಗ್ಯವಂತರಾಗಬೇಕು ಎಂದರು.ತಾಲೂಕು ವೈದ್ಯಾಧಿಕಾರಿ ಡಾ. ಸೀಮಾ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಜನರು ಒತ್ತಡ ಹಾಗೂ ಇತರೆ ಗಡುವುಗಳ ನಡುವೆ ತಮ್ಮ ಜೀವನ ಸಾಗಿಸುತ್ತಿದ್ದಾರೆ. ತಮ್ಮ ಮನಸ್ಸಿನ ಮೇಲೆ ಹಿಡಿತವಿದ್ದರೆ ಇತರರೊಂದಿಗೆ ಉತ್ತಮ ಬಾಂಧವ್ಯದಿಂದ ಇರಬಹುದು. ಯೋಗ ಮಾಡುವುದರಿಂದ ಇವುಗಳೆಲ್ಲವು ಸಾಧ್ಯ. ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾನಿಲಯದ ಜಿಲ್ಲಾ ಮುಖ್ಯಸ್ಥರಾದ ಭಾಗ್ಯ, ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಮತ್ತು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳು ಹಾಜರಿದ್ದರು. --- ಬಾಕ್ಸ್ ---ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಚಿಕ್ಕಮಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿವಿಧ ಯೋಗ ಸಂಸ್ಥೆಗಳ ಆಶ್ರಯದಲ್ಲಿ ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಚಿಕ್ಕಮಗಳೂರಿನ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 20 ಕೆಸಿಕೆಎಂ 5ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನಲ್ಲಿ ವಿವಿಧ ಇಲಾಖೆಗಳ ಆಶ್ರಯದಲ್ಲಿ ಗುರುವಾರ ಯೋಗ ಜಾಥ ನಡೆಯಿತು.