ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮಣಿಪಾಲದಲ್ಲಿ ಪ್ರತಿಭಟನೆ

KannadaprabhaNewsNetwork |  
Published : Nov 07, 2026, 02:45 AM IST
ಉನ್ನತ ತನಿಖೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಇಲ್ಲಿನ ಪೆರ್ಡೂರಿನ ಹಿಂದೂ ಕಾರ್ಯಕರ್ತ ಪ್ರದೀಪ್ ಪೂಜಾರಿ (28) ಆತ್ಮಹತ್ಯೆ ಪ್ರಕರಣದ ಉನ್ನತ ಹಾಗೂ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಮಣಿಪಾಲದಲ್ಲಿ ಬುಧವಾರ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮಣಿಪಾಲ : ಇಲ್ಲಿನ ಪೆರ್ಡೂರಿನ ಹಿಂದೂ ಕಾರ್ಯಕರ್ತ ಪ್ರದೀಪ್ ಪೂಜಾರಿ (28) ಆತ್ಮಹತ್ಯೆ ಪ್ರಕರಣದ ಉನ್ನತ ಹಾಗೂ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಮಣಿಪಾಲದಲ್ಲಿ ಬುಧವಾರ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. 27 ರಂದು ಯುವತಿಯ ಮನೆ ಬಳಿ ಹಲ್ಲೆಗೊಳಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಪ್ರದೀಪ್, 30 ರಂದು ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಹಲ್ಲೆ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್‌ಐಆರ್ ದಾಖಲಾಗದೇ ಕೇವಲ ದೂರು ಮಾತ್ರ ದಾಖಲಾಗಿತ್ತು. ಪ್ರದೀಪ್ ಯುವತಿಯ ಸಂಬಂಧಿಕರ ನಡೆಸಿದ ಹಲ್ಲೆಯೇ ಆತನ ಆತ್ಮಹತ್ಯೆಗೆ ಪ್ರಚೋದನೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹಲ್ಲೆಗೊಳಗಾದ ಪ್ರದೀಪ್‌ಗೆ ನ್ಯಾಯ ದೊರಕಿಸಿಕೊಡದಿದ್ದರೆ ಜಿಲ್ಲಾದ್ಯಂತ ಹೋರಾಟ ಮುಂದುವರಿಸಲಾಗುವುದು ಎಂದು ಪ್ರತಿಭಟನೆಯಲ್ಲಿ ಎಚ್ಚರಿಕೆ ನೀಡಲಾಯಿತು.

ನಂತರ ಪ್ರದೀಪ್ ಪೂಜಾರಿ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಪ್ರಕರಣವನ್ನು ವಿಶೇಷ ತನಿಖಾ ತಂಡ ಅಥವಾ ಸಿಓಡಿಯಂತಹ ಉನ್ನತ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಬಿಲ್ಲವ ಯುವ ವೇದಿಕೆಯ ಪ್ರವೀಣ್ ಪೂಜಾರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.

ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ವಿಹಿಂಪ ನಾಯಕ ಸುನಿಲ್ ಕೆ. ಆರ್., ಹಿಂದೂಪರ ಸಂಘಟನೆಗಳ ಶ್ರೀಕಾಂತ್ ಶೆಟ್ಟಿ, ಬಿಜೆಪಿಯ ಗೀತಾಂಜಲಿ ಸುವರ್ಣ, ವಿಜಯ ಕೊಡವೂರು ಮುಂತಾದವರು ಭಾಗವಹಿಸಿದ್ದರು.

ಮಧ್ಯಪ್ರದೇಶದಲ್ಲಿ ಇಬ್ಬರು ವಶ: ಪ್ರದೀಪ್ ಪೂಜಾರಿ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರಚೋದನೆಯ ಆರೋಪದಲ್ಲಿ ಉಡುಪಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಧ್ಯಪ್ರದೇಶ ವಶಕ್ಕೆ ಪಡೆಯಲಾಗಿದ್ದು, ಉಡುಪಿಗೆ ಕರೆತರಲಾಗುತ್ತಿದೆ. ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆರೋಪಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ