ಕನ್ನಡಪ್ರಭ ವಾರ್ತೆ ಮಡಿಕೇರಿ
ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ ಮಾತೃವಂದನಾ ಯೋಜನೆ ಅಡಿ ಮೊದಲನೇ ಮಗುವಿಗೆ ಎರಡು ಕಂತುಗಳಲ್ಲಿ 5 ಸಾವಿರ ಹಣವನ್ನು ಹಾಗೂ ಎರಡನೇ ಹೆಣ್ಣು ಮಗುವಿಗೆ ಒಂದೇ ಕಂತಿ ನಲ್ಲಿ ಆರು ಸಾವಿರ ರು. ಪಡೆಯಬಹುದಾಗಿದೆ ಎಂದರು.
ತಾಯಿಯ ಆರೋಗ್ಯ ವರ್ಧನೆ ಹಾಗೂ ಪೂರಕ ಆಹಾರಕ್ಕಾಗಿ, ಆರೋಗ್ಯವಂತ ಮಗುವಿನ ಜನನಕ್ಕಾಗಿ ಸರ್ಕಾರದ ವತಿಯಿಂದ ನೀಡುವಂತಹ ಪ್ರೋತ್ಸಾಹ ಧನವಾಗಿರುತ್ತದೆ. ಈ ಮೊತ್ತವನ್ನು ನೇರ ನಗದು ವರ್ಗಾವಣೆಯ ಮೂಲಕ ಫಲಾನುಭವಿಯ ಆಧಾರ್ ನೋಂದಣಿಯಾದ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದು ಎಂದು ಸವಿತಾ ಅವರು ತಿಳಿಸಿದರು.ಈ ಸೌಲಭ್ಯವನ್ನು ಪಡೆಯಲು ಸರ್ಕಾರಿ ನೌಕರಳಲ್ಲದ ಗರ್ಭಿಣಿಯು ಅಂಗನವಾಡಿ ಕಾರ್ಯಕರ್ತೆಯನ್ನು 180 ದಿನಗಳೊಳಗೆ ಸಂಪರ್ಕಿಸಲು ಹಾಗೂ ಎರಡನೇ ಹೆಣ್ಣು ಮಗುವಿನ ಸೌಲಭ್ಯ ಪಡೆಯಲು ಮಗು ಜನಿಸಿದ ಮೂರು ಅಂಗನವಾಡಿ ಕಾರ್ಯಕರ್ತೆಯನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಲಾಯಿತು.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆಯ ಮಾಹಿತಿಯ ಪ್ರತಿ, ಫಲಾನುಭವಿಗಳ ಆಧಾರ್ ಕಾರ್ಡ್ ಪ್ರತಿ, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ನೋಂದಣಿ ಆಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಈಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಯಾವುದಾದರೂ ಒಂದು ಪ್ರತಿಯನ್ನು ಹೊಸ ಬಡಾವಣೆ ಅಂಗನವಾಡಿ ಕೇಂದ್ರಕ್ಕೆ ಸಂಬಂಧಿಸಿದ ಅರ್ಹ ಫಲಾನುಭವಿಗಳನ್ನು ನೋಂದಣಿ ಮಾಡಲಾಯಿತು.