ದೊಡ್ಡಬಳ್ಳಾಪುರ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನವದೆಹಲಿಯಿಂದ ಡಾ.ಗಾಡಧರ್ ಮಹೋಪಾತ್ರ ರವರ ತಂಡವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಜಿಪಂ ಸಿಇಒ ಡಾ. ಅನುರಾಧ, ಪಿಪಿಟಿ ಪ್ರದರ್ಶನ ಮೂಲಕ ಮಾಹಿತಿ ನೀಡಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ, ಜಲ ಜೀವನ್ ಮಿಷನ್, 15ನೇ ಹಣಕಾಸು, ಸ್ವಚ್ಚ ಭಾರತ್ ಮಿಷನ್, ಎನ್ ಆರ್ ಎಲ್ ಎಮ್ ಯೋಜನೆ, ಕೂಸಿನ ಮನೆ, ಗ್ರಂಥಾಲಯ, ವಸತಿ ಯೋಜನೆಗಳು, ಅಟಲ್ ಭೂಜಲ್ ಯೋಜನೆ ಹಾಗೂ ಇತರೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವುದನ್ನು ವಿವರವಾಗಿ ಮಂಡಿಸಿದರು.
ಬಳಿಕ APPPA ವಾರ್ಷಿಕ ಫ್ಲಾಗ್ ಶಿಪ್ ಕಾರ್ಯಕ್ರಮದ 14 ಹಿರಿಯ ಅಧಿಕಾರಿಗಳ ತಂಡವು ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮೆಚ್ಚುಗೆ ವ್ಯಕ್ತಿಪಡಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾ ಅಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕರು ವಿಠ್ಠಲ್ ಕಾವ್ಳೆ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.
ಫೋಟೋ-26ಕೆಡಿಬಿಪಿ1-ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಸಂಸ್ಥೆ ಕೇಂದ್ರ ತಂಡ ಭೇಟಿ ನೀಡಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹಿಸಿತು.