ನಾಳೆ ಚನ್ನಪಟ್ಟಣದಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ

KannadaprabhaNewsNetwork |  
Published : Sep 04, 2026, 02:15 AM IST
1ಕೆಆರ್ ಎಂಎನ್ 2.ಜೆಪಿಜಿರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಪ್ರಜಾ ಸೇವಾ ಆಂದೋಲನದ ಪೂರ್ವಭಾವಿ ಸಿದ್ದತೆ ಸಭೆ ನಡೆಯಿತು. | Kannada Prabha

ಸಾರಾಂಶ

ರಾಮನಗರ: ಸಾರ್ವಜನಿಕರ ಕುಂದು-ಕೊರತೆಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಜಾಸೇವಾ ಅಭಿಯಾನ ಚನ್ನಪಟ್ಟಣ ತಾಲೂಕಿನ ಕಸಬಾ ಹೋಬಳಿ ಡಾ. ಅಂಬೇಡ್ಕರ್ ಭವನದಲ್ಲಿ ಸೆ.5ರಂದು ಹಮ್ಮಿಕೊಂಡಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚನೆ ನೀಡಿದರು

ರಾಮನಗರ: ಸಾರ್ವಜನಿಕರ ಕುಂದು-ಕೊರತೆಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಜಾಸೇವಾ ಅಭಿಯಾನ ಚನ್ನಪಟ್ಟಣ ತಾಲೂಕಿನ ಕಸಬಾ ಹೋಬಳಿ ಡಾ. ಅಂಬೇಡ್ಕರ್ ಭವನದಲ್ಲಿ ಸೆ.5ರಂದು ಹಮ್ಮಿಕೊಂಡಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಚನ್ನಪಟ್ಟಣ ಕ್ಷೇತ್ರದ ಶಾಸಕರ ಉಪಸ್ಥಿತಿಯಲ್ಲಿ ಪ್ರಜಾಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಚನ್ನಪಟ್ಟಣ ತಾಲೂಕು ವ್ಯಾಪ್ತಿಯ ನಗರ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ ಪ್ರಜಾಸೇವೆ ಆಂದೋಲನಾ ಸಭೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಈಗಾಗಲೇ ಕರಪತ್ರಗಳನ್ನು ಮನೆ-ಮನೆಗೆ ವಿತರಿಸಲಾಗುತ್ತಿದೆ. ಕಸ ವಿಲೇವಾರಿ ವಾಹನಗಳಲ್ಲಿ ಧ್ವನಿವರ್ಧಕದಲ್ಲಿ ಪ್ರಚಾರ ಮಾಡಲಾಗುತ್ತಿದೆ ಎಂದರು.

ಪ್ರಜಾಸೇವೆ ಆಂದೋಲನಾ ಸಭೆಯಲ್ಲಿ ಗೊಂದಲ ಉಂಟಾಗದಂತೆ ಸಾರ್ವಜನಿಕರು ಅಹವಾಲು ಸಲ್ಲಿಸಲು ಕಂದಾಯ, ನಗರಸಭೆ, ತಾಪಂ, ಕೃಷಿ, ರೇಷ್ಮೆ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ ಮತ್ತು ನಾಗರೀಕ ಸರಾಬರಾಜು ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಅರ್ಜಿ ಸಲ್ಲಿಸುವ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಬೇಕು ಮತ್ತು ಇಲಾಖೆ ನಾಮಫಲಕ, ಕಾರ್ಯಕ್ರಮ ಹಾಗೂ ಯೋಜನೆಗಳ ಮಾಹಿತಿಯುಳ್ಳ ಸ್ಟಾಲ್‌ಗಳನ್ನು ತೆರೆಯಬೇಕು ಎಂದು ತಿಳಿಸಿದರು.

ಕೌಂಟರ್‌ಗಳಲ್ಲಿ ಆಯಾ ಇಲಾಖೆಯಿಂದ ಕಂಪ್ಯೂಟರ್/ಲ್ಯಾಪ್‌ಟಾಪ್, ಪ್ರಿಂಟರ್ ಹಾಗೂ ಇಂಟರ್ನೆಟ್ ಸೌಲಭ್ಯ, ಆನ್‌ಲೈನ್‌ನಲ್ಲಿ ಅರ್ಜಿ ಹಾಗೂ ಅಹವಾಲು ಸಲ್ಲಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಪ್ರಜಾಸೇವಾ ಅಭಿಯಾನ ಸಭೆಗಳಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮೂರು ದಿನಗಳೊಳಗೆ ಸಮಸ್ಯೆಗಳನ್ನು ಪರಿಹರಿಸಿ ಅರ್ಜಿ ವಿಲೇವಾರಿ ಮಾಡಬೇಕು. ಸಭೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ ಒದಗಿಸಬೇಕು. ಜನರಿಂದ ನೂಕುನುಗ್ಗಲು ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಜಿಪಂ ಉಪ ಕಾರ್ಯದರ್ಶಿ ಧನರಾಜ್, ಉಪ ವಿಭಾಗಾಧಿಕಾರಿ ಬಿನೋಯ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶೇಖರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

1ಕೆಆರ್ ಎಂಎನ್ 2.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಪ್ರಜಾ ಸೇವಾ ಆಂದೋಲನದ ಪೂರ್ವಭಾವಿ ಸಿದ್ದತೆ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರೀಡೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಶಾಸಕ ಬೇಳೂರು
ಸದಸ್ಯರು ಸಂಘದ ಮೂಲಕವೇ ವ್ಯಾಪಾರ ನಡೆಸಿ: ರಾಜಶೇಖರ್