ಸೆ.5ರಿಂದ ಜಿಲ್ಲೆಯಲ್ಲಿ ಪ್ರಜಾಸೇವಾ ಆಂದೋಲನ

KannadaprabhaNewsNetwork |  
Published : Aug 23, 2026, 03:00 AM IST
ಪೋಟೋ-22ಬಿಕೆಟಿ1, ಜಿಲ್ಲಾಧಿಕಾರಿ ಸಂಗಪ್ಪ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ಜಿಲ್ಲೆಯ ಜನರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ಸೆ.5 ರಿಂದ ತಾಲೂಕಾ ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲೆಯ ಜನರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ಸೆ.5 ರಿಂದ ತಾಲೂಕಾ ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಸಭೆಗಳಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಿ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.ತಾಲೂಕಾ ಮಟ್ಟದ ಪ್ರಜಾಸೇವಾ ಆಂದೋಲನ

ಸೆ.5 ರಂದು ಬೆಳಿಗ್ಗೆ 10.30 ಗಂಟೆಗೆ ಬಾಗಲಕೋಟೆಯ ಜಿಪಂ ಸಭಾಭವನದಲ್ಲಿ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ವಹಿಸಲಿದ್ದು, ಶಾಸಕ ಉಮೇಶ ಮೇಟಿ ನೇತೃತ್ವ ವಹಿಸಲಿದ್ದಾರೆ. ಸೆ.12 ರಂದು ಬೆಳಿಗ್ಗೆ 10.30 ಗಂಟೆಗೆ ಮುಧೋಳ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ನಡೆಯುವ ಸಭೆಗೆ ಶಾಸಕ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆ ವಹಿಸಲಿದ್ದಾರೆ. ಸೆ.19 ರಂದು ಬೆಳಿಗ್ಗೆ 10.30 ಗಂಟೆಗೆ ಇಳಕಲ್ಲಿನ ವಾರ್ಡ ನಂ.2, ನಗರಸಭೆ ಕಚೇರಿ ಸಮೀಪದ ರಂಗಮಂದಿರದಲ್ಲಿ ನಡೆಯುವ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಲಿದ್ದಾರೆ. ಸೆ.26 ರಂದು ಬೆಳಿಗ್ಗೆ 10.30 ಗಂಟೆಗೆ ಬೀಳಗಿ ತಾಲೂಕಾ ಆಡಳಿತ ಸೌಧದ ಆವರಣದಲ್ಲಿ ನಡೆಯುವ ಸಭೆಗೆ ಬೀಳಗಿ ಶಾಸಕ ಜೆ.ಟಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಹೋಬಳಿ ಮಟ್ಟದಲ್ಲೂ ಪ್ರಜಾಸೇವಾ ಆಂದೋಲನಹೋಬಳಿ ಮಟ್ಟದಲ್ಲಿಯೂ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ. ಸೆ.5 ರಂದು ಬೆಳಿಗ್ಗೆ 10.30 ಗಂಟೆಗೆ ಲೋಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ ಅಧ್ಯಕ್ಷತೆ ಸಭೆ ನಡೆಯಲಿದ್ದು, ಜಮಖಂಡಿ ಗುರುದೇವ ರಾನಡೆ ಭವನ, ಪಿ.ಬಿ. ಹೈಸ್ಕೂಲ್‌ನಲ್ಲಿ ಶಾಸಕ ಜಗದೀಶ ಗುಡಗುಂಟಿ ಅಧ್ಯಕ್ಷತೆಯಲ್ಲಿ, ಗುಳೇದಗುಡ್ಡ ಕರನಂದಿ ಕಲ್ಯಾಣ ಮಂಟಪದಲ್ಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ, ತೇರದಾಳ ಪುರಸಭೆ ಕಚೇರಿಯಲ್ಲಿ ಶಾಸಕ ಸಿದ್ದು ಸವದಿ ಅಧ್ಯಕ್ಷತೆಯಲ್ಲಿ, ಅನಗವಾಡಿ ಬಸವೇಶ್ವರ ಸಭಾಭವನದಲ್ಲಿ ಶಾಸಕ ಜೆ.ಟಿ.ಪಾಟೀಲ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿವೆ.ಸೆ.12 ರಂದು ಬೆಳಿಗ್ಗೆ 10.30ಕ್ಕೆ ಸಾವಳಗಿ ಮಾಳಿ ಸಭಾಭವನದಲ್ಲಿ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಶಾಸಕ ನಾಡೋಜ ಜಗದೀಶ ಗುಡಗುಂಟಿ ವಹಿಸಲಿದ್ದಾರೆ. ಹೊಸೂರ ಗ್ರಾಪಂ ಸಭಾಭವನದಲ್ಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ, ಗಿರಿಸಾಗರ ರುದ್ರಮುನಿ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಬೀಳಗಿ ಶಾಸಕ ಜೆ.ಟಿ.ಪಾಟೀಲ ಅಧ್ಯಕ್ಷತೆಯಲ್ಲಿ, ರಾಂಪೂರ ಗ್ರಾಪಂ ಸಭಾಭವನದಲ್ಲಿ ಶಾಸಕ ಉಮೇಶ ಮೇಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.ಸೆ.19 ರಂದು ಬೆಳಿಗ್ಗೆ 10.30 ಗಂಟೆಗೆ ಬೆಳಗಲಿ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶಾಸಕ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆಯಲ್ಲಿ, ಮರೇಗುದ್ದಿ ಗ್ರಾಪಂ ಕಚೇರಿಯ ಸಭಾಭವನದಲ್ಲಿ ಶಾಸಕ ನಾಡೋಜ ಜಗದೀಶ ಗುಡಗುಂಟಿ ಅಧ್ಯಕ್ಷತೆಯಲ್ಲಿ, ಹಳದೂರ ಗ್ರಾಪಂನಲ್ಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ, ತೇರದಾಳ ಪುರಸಭೆಯಲ್ಲಿ ಶಾಸಕ ಸಿದ್ದು ಸವದಿ ಅಧ್ಯಕ್ಷತೆಯಲ್ಲಿ, ಸಿದ್ದಾಪೂರ ವಾಲ್ಮೀಕಿ ಸಮುದಾಯ ಭವನದಲ್ಲಿ ಶಾಸಕ ಜೆ.ಟಿ.ಪಾಟೀಲ ಅಧ್ಯಕ್ಷತೆಯಲ್ಲಿ, ತಿಮ್ಮಾಪೂರ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಶಾಸಕ ಉಮೇಶ ಮೇಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೆ.26 ರಂದು ಬೆಳಿಗ್ಗೆ 10.30 ಗಂಟೆಗೆ ಮಂಟೂರು ಗ್ರಾಪಂ ಆವರಣದಲ್ಲಿ ಶಾಸಕ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆಯಲ್ಲಿ, ಗೋಠೆ ಅಂಬೇಡ್ಕರ ಭವನದಲ್ಲಿ ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ ಅಧ್ಯಕ್ಷತೆಯಲ್ಲಿ, ಕುಳಗೇರಿ ಕ್ರಾಸ್ ಬಸವ ಭವನದಲ್ಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ, ರಬಕವಿ-ಬನಹಟ್ಟಿ ತಹಶೀಲ್ದಾರ ಕಚೇರಿಯಲ್ಲಿ ಶಾಸಕ ಸಿದ್ದು ಸವದಿ ಅಧ್ಯಕ್ಷತೆಯಲ್ಲಿ, ಬೆಣ್ಣೂರ ಗ್ರಾಪಂ ಆವರಣದಲ್ಲಿ ಶಾಸಕ ಉಮೇಶ ಮೇಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.ಬಾಕ್ಸ್

ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಪ್ರಜಾಸೇವಾ ಆಂದೋಲನದ ಮೂಲಕ ಕಂದಾಯ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ವಸತಿ, ರಸ್ತೆ, ವಿದ್ಯುತ್, ಕೃಷಿ, ಶಿಕ್ಷಣ, ಆರೋಗ್ಯ, ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಸಾರ್ವಜನಿಕರು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಸಭೆಗಳಲ್ಲಿ ಸ್ವೀಕರಿಸುವ ಅಹವಾಲುಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಂಡು, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಬ್ಬದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ
ಪ್ರತಿಭಾವಂತ ಗಾಯಕರಿಗೆ ವೇದಿಕೆ ಕಲ್ಪಿಸಲು ರಾಜ್ಯಮಟ್ಟ ಕಾರ್ಯಕ್ರಮ