ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಪ್ರಜಾಸೇವಾ: ವಿ. ಸುನಿಲ್ ಕುಮಾರ್

KannadaprabhaNewsNetwork |  
Published : Nov 22, 2026, 02:30 AM IST
ಶನಿವಾರ ಹಿರ್ಗಾನದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು | Kannada Prabha

ಸಾರಾಂಶ

ಜನಸ್ಪಂದನ ಕಾರ್ಯಕ್ರಮದ ಹೆಸರನ್ನು ಬದಲಿಸಿ ಪ್ರಜಾಸೇವಾ ಕಾರ್ಯಕ್ರಮವಾಗಿ ರೂಪಿಸಲಾಗಿದ್ದು, ಜನರ ಸಮಸ್ಯೆಗಳಿಗೆ ಅಧಿಕಾರಿಗಳ ಮೂಲಕ ತ್ವರಿತ ಪರಿಹಾರ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಕಳೆದ ಎರಡು ತಿಂಗಳಲ್ಲಿ ಎಷ್ಟು ಸಮಸ್ಯೆಗಳು ಪರಿಹಾರವಾಗಿವೆ, ಅಧಿಕಾರಿಗಳು ಜನರ ಅಹವಾಲುಗಳಿಗೆ ಎಷ್ಟರ ಮಟ್ಟಿಗೆ ಸ್ಪಂದಿಸಿದ್ದಾರೆ ಎಂಬುದರ ಮಾಹಿತಿ ಪಡೆದು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.

ಕಾರ್ಕಳ: ಜನಸ್ಪಂದನ ಕಾರ್ಯಕ್ರಮದ ಹೆಸರನ್ನು ಬದಲಿಸಿ ಪ್ರಜಾಸೇವಾ ಕಾರ್ಯಕ್ರಮವಾಗಿ ರೂಪಿಸಲಾಗಿದ್ದು, ಜನರ ಸಮಸ್ಯೆಗಳಿಗೆ ಅಧಿಕಾರಿಗಳ ಮೂಲಕ ತ್ವರಿತ ಪರಿಹಾರ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಕಳೆದ ಎರಡು ತಿಂಗಳಲ್ಲಿ ಎಷ್ಟು ಸಮಸ್ಯೆಗಳು ಪರಿಹಾರವಾಗಿವೆ, ಅಧಿಕಾರಿಗಳು ಜನರ ಅಹವಾಲುಗಳಿಗೆ ಎಷ್ಟರ ಮಟ್ಟಿಗೆ ಸ್ಪಂದಿಸಿದ್ದಾರೆ ಎಂಬುದರ ಮಾಹಿತಿ ಪಡೆದು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.ಶನಿವಾರ ಹಿರ್ಗಾನದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಯಾವ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ, ಡಿಸೆಂಬರ್‌ನಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಈ ವಿಚಾರಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಅಧಿಕಾರಿಗಳ ಸಮ್ಮುಖದಲ್ಲೇ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದು ಪ್ರಜಾಸೇವಾ ಕಾರ್ಯಕ್ರಮದ ಉದ್ದೇಶ. ಹಕ್ಕುಪತ್ರ, 9/11, ಕುಡಿಯುವ ನೀರು ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಹರಿಸಬಹುದಾದ ಸಾಮುದಾಯಿಕ ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಬೇಕು. ಸರ್ಕಾರ, ಕೇಂದ್ರ ಸರ್ಕಾರ ಹಾಗೂ ನ್ಯಾಯಾಲಯದ ಮಟ್ಟದಲ್ಲಿ ಪರಿಹಾರ ಅಗತ್ಯವಿರುವ ಸಮಸ್ಯೆಗಳಿಗೆ ಒಗ್ಗಟ್ಟಿನಿಂದ ಪ್ರಯತ್ನಿಸಬೇಕು ಎಂದರು.ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾತನಾಡಿ, ಹಕ್ಕುಪತ್ರ ಹಾಗೂ ರಸ್ತೆ ದುರಸ್ತಿ ಸಂಬಂಧಿತ ಅಹವಾಲುಗಳು ಹೆಚ್ಚಾಗಿ ಬರುತ್ತಿವೆ. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಿ ಜನರಿಗೆ ಸ್ಪಂದಿಸಬೇಕು. ಗ್ರಾಮ ಪಂಚಾಯಿತಿ ಸದಸ್ಯರಿಗೆ ಇರುವ ಮಾಹಿತಿ ಸಾರ್ವಜನಿಕರಿಗೂ ಲಭ್ಯವಾಗುವಂತೆ ಅಧಿಕಾರಿಗಳು ಜನರ ಬಳಿಗೆ ತೆರಳಿ ಸೇವೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್, ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಪೊಟ್ಟನ್ ದೇವರ ನೂತನ ಗುಡಿಗೆ ಭೂಮಿ ಪೂಜೆ
ಸರ್ವೇ ಇಲಾಖೆಗೆ ಲೋಕಾಯುಕ್ತ ದಿಢೀರ್ ದಾಳಿ: ಪರಿಶೀಲನೆ