ಜನಸ್ಪಂದನೆ ಮಾದರಿಯಲ್ಲಿ ‘ಪ್ರಜಾಸೇವಾ’: ಸುನಿಲ್

KannadaprabhaNewsNetwork |  
Published : Sep 24, 2026, 02:45 AM IST
ಶಾಸಕ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. | Kannada Prabha

ಸಾರಾಂಶ

ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಒಂದೇ ಸ್ಥಳದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಜಾಸೇವಾ ಆಂದೋಲನ ಉತ್ತಮ ಅವಕಾಶ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.

ಕಾರ್ಕಳ: ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಒಂದೇ ಸ್ಥಳದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಜಾಸೇವಾ ಆಂದೋಲನ ಉತ್ತಮ ಅವಕಾಶ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.ಮಿಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ಪ್ರಜಾಸೇವಾ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಹಿಂದೆ ನಡೆಯುತ್ತಿದ್ದ ಜನಸ್ಪಂದನೆ ಕಾರ್ಯಕ್ರಮದ ಮಾದರಿಯಲ್ಲೇ ಪ್ರಸ್ತುತ ಪ್ರಜಾಸೇವಾ ಆಂದೋಲನ ಆಯೋಜಿಸಲಾಗುತ್ತಿದೆ. ವಿವಿಧ ಸರ್ಕಾರಿ ಸೇವೆಗಳನ್ನು ಜನರ ಬಳಿಗೇ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಮಾತನಾಡಿ, ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್ ಉಪಸ್ಥಿತರಿದ್ದರು. ತಹಶೀಲ್ದಾರ್ ಪ್ರದೀಪ್ ಆರ್. ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಶ್ವೇಶತೀರ್ಥರ ಸೇವಾ ಪ್ರಕಲ್ಪ ಪುನಶ್ಚೇತನ: ಶ್ರೀವಿಶ್ವಪ್ರಸನ್ನತೀರ್ಥರು
ಸ್ವಾವಲಂಬಿ ಬದುಕಿಗೆ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಅಶೋಕ್ ರೈ