ಕಾರಟಗಿ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಪ್ರಜಾಸೇವಾ ಆಂದೋಲನ ಉತ್ತಮ ವೇದಿಕೆಯಾಗಿದೆ ಎಂದು ತಹಸೀಲ್ದಾರ್ ಎಂ. ಕುಮಾರಸ್ವಾಮಿ ಹೇಳಿದರು.
ತಾಪಂ ಇಒ ಲಕ್ಷ್ಮೀದೇವಿ ಯಾದವ್ ಮಾತನಾಡಿ, ವಿವಿಧ ಕೆಲಸಗಳಿಗಾಗಿ ಜನರು ಸರ್ಕಾರಿ ಕಚೇರಿಗಳಿಗೆ ಪ್ರತಿದಿನ ಅಲೆದಾಡುವುದನ್ನು ತಪ್ಪಿಸಿ, ಒಂದೇ ವೇದಿಕೆಯಲ್ಲಿ ಇಲಾಖೆಗಳ ಸೇವೆ ಒದಗಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಆಯೋಜಿಸಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.
ಸಭೆಯಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಿದ ತಹಸೀಲ್ದಾರ್ ಮತ್ತು ಇಒ, ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿವಿಧ ಇಲಾಖೆಗಳ ಕೌಂಟರ್ ತೆರವು: ಸಾರ್ವಜನಿಕರ ಅನುಕೂಲಕ್ಕಾಗಿ ದೇವಸ್ಥಾನದ ಆವರಣದಲ್ಲಿ ವಿವಿಧ ಇಲಾಖೆಗಳ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಸಾರ್ವಜನಿಕರು ಅರ್ಜಿ ಸಲ್ಲಿಸಲು ಹಾಗೂ ಇಲಾಖೆಗಳ ಸೇವೆ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.