ಪ್ರಜಾಸೌಧ ನಿರ್ಮಾಣಕ್ಕೆ ಸದ್ಯದಲ್ಲಿಯೇ ಚಾಲನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

KannadaprabhaNewsNetwork |  
Published : Mar 11, 2025, 12:52 AM IST
10ಕೆಎಂಎನ್ ಡಿ19 | Kannada Prabha

ಸಾರಾಂಶ

ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸ್ಥಳ ನಿಗದಿಯಾಗಿದೆ. ಸರ್ಕಾರಿ ಶಾಲೆ ಹಳೆ ಕಟ್ಟಡವನ್ನು ತೆರವುಗೊಳಿಸಿ ಒಂದೇಸೂರಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಗುವಂತೆ ಮಾಡುವ ಉದ್ದೇಶದಿಂದ ಪ್ರಜಾಸೌಧ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕು ಕಚೇರಿ ಹಾಗೂ ಎಲ್ಲಾ ಸರ್ಕಾರಿ ಇಲಾಖೆ ಕಚೇರಿ ಒಳಗೊಂಡ ಪ್ರಜಾಸೌಧ ನಿರ್ಮಾಣಕ್ಕೆ ಸದ್ಯದಲ್ಲಿಯೇ ಚಾಲನೆ ನೀಡಲಾಗುವುದು ಎಂದು ಶಾಸಕ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ಭರವಸೆ ನೀಡಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸ್ಥಳ ನಿಗದಿಯಾಗಿದೆ. ಸರ್ಕಾರಿ ಶಾಲೆ ಹಳೆ ಕಟ್ಟಡವನ್ನು ತೆರವುಗೊಳಿಸಿ ಒಂದೇಸೂರಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಗುವಂತೆ ಮಾಡುವ ಉದ್ದೇಶದಿಂದ ಪ್ರಜಾಸೌಧ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಎಂದರು.

ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಸಮಾನಾಗಿ ತಯಾರು ಮಾಡುವ ಗುರಿ ಹೊಂದಲಾಗಿದೆ, ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಈಗಾಗಲೇ ತಾಲೂಕಿನ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ನೀಡುವ ಕಾರ್ಯ ಆರಂಭಿಸಲಾಗಿದೆ. ಇನ್ನೂ 2-3 ತಿಂಗಳಲ್ಲಿ ಇದು ಪೂರ್ಣಗೊಳ್ಳಲಿದೆ. ಡಿಜಿಟಲೀಕರಣಗೊಳ್ಳುತ್ತಿರುವ ರಾಜ್ಯದ ಮೊದಲ ತಾಲೂಕು ನಮ್ಮ ಮಳವಳ್ಳಿ ಎಂದರು.

ಸ್ಪರ್ಧಾತ್ಮಕ ಯುಗದಲ್ಲಿ ವೈಜ್ಞಾನಿಕ ಶಿಕ್ಷಣಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತನ್ನ ಮನಸ್ಥಿತಿ ಬದಲಾಯಿಸಿಕೊಳ್ಳುವ ಜೊತೆಗೆ ಸೋಮಾರಿತನ ತೊರೆದು ನಿರಂತರ ವಿದ್ಯಾಭ್ಯಾಸಕ್ಕೆ ಮುಂದಾಗಬೇಕು. ತಂತ್ರಜ್ಞಾನ ಆಧಾರಿತ ಶಿಕ್ಷಣ ಪಡೆದು ಉದ್ಯೋಗ ಪಡೆದುಕೊಳ್ಳುತ್ತಾ ಗಮನ ಹರಿಸಬೇಕು ಎಂದರು.

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಕಾವೇರಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಪುರುಷನಷ್ಟೆ ಸಮಾನತೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಷ್ಟ್ರವೇ ಮೆಚ್ಚುವಂತಹ ಸಾಧನೆ ಮಾಡಿದ್ದಾರೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲೆ ಡಿ.ಯಶೋಧಾ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಬಿಇಒ ವಿ.ಈ.ಉಮಾ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ.ರವೀಂದ್ರಕುಮಾರ್, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಿದ್ದಾರ್ಥ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ.ರಾಜು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿ.23ಕ್ಕೆ ರೈತರ ದಿನಾಚರಣೆ, ರಾಜ್ಯಮಟ್ಟದ ಸಮಾವೇಶ
ಪ್ರಜಾಸೌಧ ನಿರ್ಮಾಣ ಜಾಗ ಬದಲಾವಣೆಗೆ ಆಗ್ರಹ