ಪ್ರಜ್ಞಾ ಉತ್ಸವ: ಕುಂದಾಪುರ ಡಾ.ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್‌

KannadaprabhaNewsNetwork | Published : Apr 24, 2025 11:47 PM

ಸಾರಾಂಶ

ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ), ಮತ್ತು ಸ್ನಾತಕೋತ್ತರ ಕೇಂದ್ರ ಉಡುಪಿ ಆಶ್ರಯದಲ್ಲಿ ರಾಜ್ಯಮಟ್ಟದ ಎರಡು ದಿನಗಳ ಅಂತರ್ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವ ‘ಪ್ರಜ್ಞಾ ೨೦೨೫’ರ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ), ಮತ್ತು ಸ್ನಾತಕೋತ್ತರ ಕೇಂದ್ರ ಉಡುಪಿ ಆಶ್ರಯದಲ್ಲಿ ರಾಜ್ಯಮಟ್ಟದ ಎರಡು ದಿನಗಳ ಅಂತರ್ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವ ‘ಪ್ರಜ್ಞಾ ೨೦೨೫’ರ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು.

ಮುಖ್ಯ ಅಭ್ಯಾಗತರಾಗಿ ಬೆಂಗಳೂರಿನ ಎಲಯನ್ಸ್ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಹಾಗೂ ಕಾನೂನು ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಮುಕುಲ್ ಸಕ್ಸೇನ ಅವರು ಹಾಗೂ ಪೂರ್ಣಪ್ರಜ್ಞ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಡಾ. ಎಂ. ಆರ್. ಹೆಗಡೆ ಆಗಮಿಸಿದ್ದರು.

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ಸುಕನ್ಯಾ ಮೇರಿ, ಪೂರ್ಣಪ್ರಜ್ಞ ಪಪೂ ಕಾಲೇಜಿನ ಪ್ರಾಂಶುಪಾಲ ಪ್ರೊ. ಸಂತೋಷ್ ಕುಮಾರ್, ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ. ರಾಮು ಎಲ್, ಪ್ರಜ್ಞಾ ಉತ್ಸವದ ಮುಖ್ಯ ಸಂಯೋಜಕ ಡಾ. ರಮೇಶ್ ಟಿ. ಎಸ್., ಸಹಸಂಯೋಜಕಿ ಜಯಲಕ್ಷ್ಮೀ, ಪ್ರಜ್ಞಾ ಉತ್ಸವದ ಸಾಂಸ್ಕೃತಿಕ ಸಂಯೋಜಕಿ ಪ್ರತಿಭಾ ಭಟ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಹಅಧಿಕಾರಿಗಳಾಗಿರುವ ಡಾ. ಸಂತೋಷ್ ಕುಮಾರ್, ಸುಮಲತಾ, ಐಕ್ಯುಎಸಿ ಸಂಯೋಜಕ ಡಾ. ವಿನಯ್ ಕುಮಾರ್ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇದ್ದರು.

ಪ್ರಜ್ಞಾ ಉತ್ಸವದ ಶೈಕ್ಷಣಿಕ ಸಂಯೋಜಕಿ ಪ್ರತಿಭಾ ಆಚಾರ್ಯ ಸ್ವಾಗತಿಸಿದರು. ಪ್ರಜ್ಞಾ ಉತ್ಸವದ ಸಾಂಸ್ಕೃತಿಕ ಸಂಯೋಜಕ ಡಾ. ಮಂಜುನಾಥ ಕರಬ ವಂದಿಸಿದರು. ವಿದ್ಯಾರ್ಥಿನಿ ಸಂಪ್ರೀತಾ ಹಾಗೂ ಶ್ರೀಪ್ರದಾ ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಕಮಲಾಕ್ಷಿ ಹಾಗೂ ಆಂಗ್ಲಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಷ್ಮಿತಾ ನಿರೂಪಿಸಿದರು.

ಪ್ರಶಸ್ತಿ ಪುರಸ್ಕೃತರು:

ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ತಂಡವು ಪ್ರಜ್ಞಾ ಉತ್ಸವದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವಿಭಾಗಗಳ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು, ಸಮಗ್ರ ತಂಡಪ್ರಶಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿತು. ಮೂಡುಬಿದಿರೆಯ ಆಳ್ವಾಸ್ ಕಾಲೇಜು ಶೈಕ್ಷಣಿಕ ವಿಭಾಗ ಹಾಗೂ ಸಮಗ್ರ ತಂಡಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿತು. ಸಾಂಸ್ಕೃತಿಕ ವಿಭಾಗದಲ್ಲಿ ಉಡುಪಿಯ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ದ್ವಿತೀಯ ಪ್ರಶಸ್ತಿ ಪಡೆದುಕೊಂಡಿತು.

Share this article