ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹ

KannadaprabhaNewsNetwork |  
Published : May 17, 2024, 12:32 AM IST
ಫೋಟೋ- ನೀಲಾ ಲೇಟರ | Kannada Prabha

ಸಾರಾಂಶ

ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಪ್ರಕರಣವನ್ನು ಎರಡು ತಿಂಗಳೊಳಗೆ ವಿಶೇಷ ತನಿಖಾದಳವು ತನಿಖೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಮುಖ್ಯಮಂತ್ರಿಗಳಿಗೆ ಪ್ರಜ್ಞಾವಂತ ನಾಗರಿಕರು ತಾವು ಬರೆದ ಪತ್ರವನ್ನು ಬಹಿರಂಗವಾಗಿ ಪ್ರದರ್ಶಿಸಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಹಾಸನ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಪ್ರಕರಣವನ್ನು ಎರಡು ತಿಂಗಳೊಳಗೆ ವಿಶೇಷ ತನಿಖಾದಳವು ತನಿಖೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಮುಖ್ಯಮಂತ್ರಿಗಳಿಗೆ ಪ್ರಜ್ಞಾವಂತ ನಾಗರಿಕರು ತಾವು ಬರೆದ ಪತ್ರವನ್ನು ಬಹಿರಂಗವಾಗಿ ಪ್ರದರ್ಶಿಸಿದರು.

ರಾಸಲೀಲೆ ಪ್ರಕರಣದ ವಿಡಿಯೋಗಳು ಲಕ್ಷಾಂತರ ಜನರಿಗೆ ತಲುಪಿರುವುದರಿಂದ ಅವು ಯುವಜನರು, ಕಾಮುಕರು ಮತ್ತು ಮಕ್ಕಳ ಮೇಲೆ ಬೀರಬಹುದಾದ ಪರಿಣಾಮ ಘೋರವಾಗಲಿದ್ದು, ಕೂಡಲೇ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ ಎಲ್ಲಿದ್ದರೂ ಬಂಧಿಸಿ, ಐಟಿ ಮತ್ತು ಐಪಿಸಿ ಕಾಯ್ದೆಯಡಿ ಮೊಕದ್ದಮೆ ಹೂಡಬೇಕು ಎಂದು ಮುಖ್ಯಮಂತ್ರಿಗಳಿಗೆ ಬರೆದ ಬಹಿರಂಗ ಪತ್ರದಲ್ಲಿ ಆಗ್ರಹಿಸಲಾಗಿದೆ.

ಜನವಾದಿ ಮಹಿಳಾ ಸಂಘಟನೆಯ ಮುಖಂಡೆ ಕೆ ನೀಲಾ ಮಾತನಾಡುತ್ತ, ಪ್ರಜ್ವಲ್ ರೇವಣ ರೇವಣನನ್ನು ಆದಷ್ಟು ಬೇಗ ಬಂದಿಸಬೇಕು ಮತ್ತು ಇಷ್ಟೆಲ್ಲಾ ಹಗರಣಗಳನ್ನು ತಮ್ಮ ಕಣ್ಣೆದುರೇ ನಡೆಯುತ್ತಿದ್ದರು ಪಕ್ಷದ ಹಿರಿಯರು ಮತ್ತು ಕುಟುಂಬದ ಎಲ್ಲಾ ಸದಸ್ಯರ ಮೇಲೆಯೂ ತನಿಖೆಗಳನ್ನು ನಡೆಸಬೇಕು. ಸಿಐಟಿ ತಂಡವು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಸಂತ್ರಸ್ತ ಮಹಿಳೆಯರು ಭೀತಿ ಇಲ್ಲದೆ ದೂರು ನೀಡುವಂತಹ ವಾತಾವರಣ ನಿರ್ಮಾಣವಾಗಬೇಕೆಂದು ಆಗ್ರಹಿಸಿದರು.

ಪದ್ಮಿನಿ ಕಿರಣಗಿ, ರೇಣುಕಾ ಸರಡಗಿ ಪದ್ಮಾ ಪಾಟೀಲ್, ಲವಿತ್ರ, ಸುಜಾತಾ, ಪ್ರಿಯಾಂಕ ಮಾವಿನಕರ್, ಪ್ರಭು ಖಾನಾಪೂರ, ಪಾಂಡುರಂಗ ಮಾವಿನಕರ, ಸುಧಾಮ ಧನ್ನಿ, ಶ್ರೀಮಂತ ಬಿರಾದಾರ ಹಾಗೂ ಅನೇಕ ಮಹಿಳಾ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ