ಕನ್ನಡಪ್ರಭ ವಾರ್ತೆ ಮಂಡ್ಯ
ಅಧಿಕಾರ ದುರುಪಯೋಗಪಡಿಸಿಕೊಂಡು ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡು ವೀಡಿಯೋ ಮಾಡಿ ಅವರ ಕುಟುಂಬದವರನ್ನು ಬೀದಿಗೆ ತಂದವನ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಪೆನ್‌ಡ್ರೈವ್ ಹಂಚಿದವರದ್ದು ತಪ್ಪೆಂದು ಹೇಳಲು ಹೊರಟಿದ್ದಾರೆ. ಈ ಪ್ರಕರಣದಲ್ಲಿ ಪ್ರಜ್ವಲ್‌ರನ್ನು ರಕ್ಷಣಾತ್ಮಕವಾಗಿ ನೋಡಿಕೊಂಡು ಬೇರೆಯವರ ಮೇಲೆ ಗೂಬೆ ಕೂರಿಸುತ್ತಾ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಪ್ರಜ್ವಲ್ ರೇವಣ್ಣಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಪ್ರಜ್ವಲ್ ಕರೆಸುತ್ತಾರೋ, ಬಿಡುತ್ತಾರೋ ಅವರ ಕುಟುಂಬಕ್ಕೆ ಬಿಟ್ಟ ವಿಚಾರ. ಕುಮಾರಸ್ವಾಮಿ ಕುಟುಂಬಕ್ಕೆ ದೇವರು ಒಳ್ಳೆಯದು ಮಾಡಲಿ. ಪ್ರಕರಣದ ಬಗ್ಗೆ ಗಂಭೀರತೆ ಇದ್ದಿದ್ದರೆ ಇಷ್ಟೋತ್ತಿಗೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡಿ, ತನಿಖೆ ಸಂಸ್ಥೆಗೆ ಸೂಚಿಸಿ ಕರೆತರುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಗೊತ್ತಾಗಲ್ಲ ಎಂದುಕೊಂಡಿದ್ದಾರೆ. ಜನರು ಎಲ್ಲಾ ನೋಡುತ್ತಿದ್ದಾರೆ, ಅವರೇ ತೀರ್ಮಾನ ಮಾಡುತ್ತಾರೆ ಎಂದರು.ರಾಜ್ಯದಲ್ಲಿ ಪೂರ್ವ ಮುಂಗಾರು ವಾಡಿಕೆಗಿಂತ ಶೇ.೫೦ರಷ್ಟು ಹೆಚ್ಚು ಮಳೆಯಾಗಿದೆ. ರೈತರಿಗೆ ಬೇಕಾದಷ್ಟು ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ ದಾಸ್ತಾನಿದೆ. ನಾಳೆ ಮುಗಿದುಹೋಗುತ್ತೆ ಎನ್ನುವ ಆತಂಕ ಬೇಡ. ಇನ್ನು ಮೂರು ತಿಂಗಳು ಸರಬರಾಜು ಮಾಡುವಷ್ಟು ಸರ್ಕಾರ ಸಮರ್ಥವಾಗಿದೆ ಎಂದರು.