ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಹೊಸತೋಟ ಗ್ರಾಮದಲ್ಲಿ ಪ್ರಸನ್ನ ಎಡಿಕೇರಿ ಅಭಿಮಾನಿ ಬಳಗದ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಈ ಸಂದರ್ಭ ಮಡಿಕೇರಿ ವೈದ್ಯಕೀಯ ಕಾಲೇಜಿನ ರಕ್ತನಿಧಿ ವಿಭಾಗದ ಡಾ. ಕರುಂಬಯ್ಯ ಅವರು ರಕ್ತದಾನಿಗಳಿಗೆ ಹಾಗೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರಿಗೆ ರಕ್ತದಾನದ ಉಪಯೋಗ, ಮಹತ್ವ ಮತ್ತು ರಕ್ತದಾನದಿಂದ ಅಮೂಲ್ಯ ಜೀವಗಳನ್ನು ಉಳಿಸಬಹುದಾದ ಬಗ್ಗೆ ಮಾಹಿತಿ ನೀಡಿದರು.
ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದ ಹೊಸತೋಟದ ರಾಜೇಶ್ ಹಾಗೂ ಹರೀಶ್ ಅವರನ್ನು ಅಭಿನಂದಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ನೇಹಿತರಿಗೆ ಹಾಗೂ ಗ್ರಾಮದ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.
ಮಡಿಕೇರಿ ವೈದ್ಯಕೀಯ ಕಾಲೇಜಿನ ವೈದ್ಯರು ಹಾಗೂ ರಕ್ತನಿಧಿ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದರು.