ಕನ್ನಡಪ್ರಭ ವಾರ್ತೆ ಮೈಸೂರು
ಈ ವೇಳೆ ಮಾತನಾಡಿದ ಅವರು, ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಮತ್ತಷ್ಟು ನೆರವು ನೀಡುವ ನಿಟ್ಟಿನಲ್ಲಿ, ಇಡೀ ದೇಶದಲ್ಲಿ ಒಂದೇ ಬ್ರ್ಯಾಂಡ್ ಅಡಿಯಲ್ಲಿ ಅಗತ್ಯ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡುವ ಮಹತ್ವಾಕಾಂಕ್ಷಿ ಉಪಕ್ರಮವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ. ಇದಕ್ಕಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಬಿಜೆಪಿ ನಗರಾಧ್ಯಕ್ಷರಾದ ಮಾಜಿ ಶಾಸಕ ಎಲ್. ನಾಗೇಂದ್ರ, ಬಿಜೆಪಿ ಮುಖಂಡರಾದ ಗಿರಿಧರ್, ಕಿರಣ್ ಗೌಡ, ಕೇಬಲ್ ಮಹೇಶ್, ರಘು ಮೊದಲಾದವರು ಇದ್ದರು.