ಹತ್ತನೇ ತರಗತಿಯಲ್ಲಿ 625ಕ್ಕೆ 625 ಪಡೆದ ವಿದ್ಯಾರ್ಥಿಗೆ ಪ್ರತಿಭಾ ಪುರಸ್ಕಾರ

KannadaprabhaNewsNetwork |  
Published : Dec 23, 2024, 01:01 AM IST
ಬಿಎನ್‌ಆರ್‌ ಪಬ್ಲಿಕ್‌ ಶಾಲೆ, ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.  ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ.ಎಸ್‌.ಮುನಿರಾಜು ಅವರನ್ನು ಗೌರವಿಸಲಾಯಿತು.  | Kannada Prabha

ಸಾರಾಂಶ

ಮೊಬೈಲ್ ಗೀಳು ಮತ್ತು ಇತರೆ ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳದೆ ಜೀವನದಲ್ಲಿ ತಂದೆ ತಾಯಿಗೆ ಹಾಗೂ ಗುರು ಹಿರಿಯರಿಗೆ ಕೀರ್ತಿ ತರುವ ಗುರಿ ಇಟ್ಟುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕ ಎಸ್.ಮುನಿರಾಜು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಪೀಣ್ಯ ದಾಸರಹಳ್ಳಿಮೊಬೈಲ್ ಗೀಳು ಮತ್ತು ಇತರೆ ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳದೆ ಜೀವನದಲ್ಲಿ ತಂದೆ ತಾಯಿಗೆ ಹಾಗೂ ಗುರು ಹಿರಿಯರಿಗೆ ಕೀರ್ತಿ ತರುವ ಗುರಿ ಇಟ್ಟುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕ ಎಸ್.ಮುನಿರಾಜು ಕರೆ ನೀಡಿದರು.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರದ ಬಾಬಣ್ಣ ಲೇಔಟ್ ನಲ್ಲಿರುವ ಬಿಎನ್‌ಆರ್‌ ಪಬ್ಲಿಕ್ ಶಾಲೆ, ಕನ್ನಡ ಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಸಹಯೋಗದಲ್ಲಿ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ಟಿ.ಎಸ್‌.ಭಾವನ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಸ್ವಾಮಿ ವಿವೇಕಾನಂದರ ವಾಣಿಯಂತೆ ಜೀವನ ಪಯಣದಲ್ಲಿ ನಿನ್ನ ಬಾಳಿನ ಶಿಲ್ಪಿ ನೀವಾಗಬೇಕು. ಕಲಿಕಾ ಸಮಯದಲ್ಲಿ ಕಾಲಹರಣ ಮಾಡದೇ ವಿದ್ಯೆಯೆಂಬ ಜ್ಞಾನವನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ಬಿಎನ್‌ಆರ್‌ ಪಬ್ಲಿಕ್ ಶಾಲೆ‌ಯಿಂದ 2024ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಟಿ.ಎಸ್‌.ಭಾವನ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದಿದ್ದಾರೆ. ಶಾಲೆ ಉತ್ತಮ ವಿದ್ಯಾಭ್ಯಾಸ ನೀಡುವಲ್ಲಿ ಹೆಗ್ಗಳಿಕೆ‌ಗೆ ಪಾತ್ರವಾಗಿ ಮಾದರಿ ಶಾಲೆಯಾಗಿ ಹೊರಹೊಮ್ಮಿದೆ ಎಂದರು.ಈ ವೇಳೆ ಕನ್ನಡಪ್ರಭದ ಸಂಯೋಜಕ ಮತ್ತು ವಿಶೇಷ ಯೋಜನೆಯ ಸಂಪಾದಕ ಬಿ.ವಿ.ಮಲ್ಲಿಕಾರ್ಜುನಯ್ಯ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಿದರು. ಬಳಿಕ ಮಾತನಾಡಿ, ಮಕ್ಕಳಿಗೆ ಶಿಕ್ಷಣವನ್ನೆ ಆಸ್ತಿಯನ್ನಾಗಿ ಮಾಡಿ ಸಂಸ್ಕಾರವಂತರನ್ನಾಗಿ ಬೆಳೆಸುವುದು ಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ವಿಶೇಷ ಪ್ರತಿಭೆ, ಸಾಧನಾ ಮನೋಭಾವ ಇದ್ದೇ ಇರುತ್ತದೆ. ಶಿಕ್ಷಕರು ಮಕ್ಕಳಲ್ಲಿ ಅಡಗಿರುವ ಅಂತಹ ಪ್ರತಿಭೆಯನ್ನು ಗುರುತಿಸಿ ಹಾಗೂ ಪ್ರೋತಾಹಿಸುವ ಮೂಲಕ ಸಾಧನೆಗೆ ದಾರಿ ತೋರಬೇಕು. ಮಕ್ಕಳಿಗೆ ಶಿಕ್ಷಣ ಜೊತೆಗೆ ಮೌಲ್ಯಯುತ ಗುಣಗಳನ್ನೂ ಬೋಧಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದರು. ಬಿಎನ್‌ಆರ್‌ ಪಬ್ಲಿಕ್ ಶಾಲೆಯ ಉಪಾಧ್ಯಕ್ಷ ರುದ್ರೇಶ್ ಕೆ.ಎಸ್ ಮಾತನಾಡಿ, ನಮ್ಮ ಶಾಲೆಯಲ್ಲಿ 1000ಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ನಮ್ಮ ಶಾಲೆಯು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ ಟಿ.ಎಸ್‌.ಭಾವನ ಎಂಬ ವಿದ್ಯಾರ್ಥಿನಿ 625ಕ್ಕೆ 625 ಅಂಕಗಳನ್ನು ಪಡೆದು ನಮ್ಮ ಶಾಲೆಗೆ ಹೆಮ್ಮೆಯನ್ನು ತಂದಿದ್ದಾರೆ. ನಮ್ಮ ಶಾಲೆಯಲ್ಲಿ ಮಧ್ಯಮ ವರ್ಗದ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಗುರಿ ನಮ್ಮ ಶಾಲೆ ಎಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಬೇಕಾದರೆ ನಮ್ಮ ಶಿಕ್ಷಕರ ಸೇವಾ ಮನೋಭಾವ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಕನ್ನಡಪ್ರಭ ಪ್ರಸರಣ ವಿಭಾಗದ ಮುಖ್ಯಸ್ಥ ಎ.ಎನ್ ಆನಂತಮೂರ್ತಿ, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮಂಜುನಾಥ ದ್ಯಾವನಗೌಡ್ರ ,ವರದಿಗಾರ ಪ್ರಶಾಂತ್ ಕೆ.ಸಿ, ಬಿಎನ್‌ಆರ್‌ ಪಬ್ಲಿಕ್ ಶಾಲೆ ಪ್ರಾಂಶುಪಾಲ ಭೂಷಣ್ ಎನ್, ಅಧ್ಯಕ್ಷ ವಿಜಯ್ ಕುಮಾರ್,ಉಪಾಧ್ಯಕ್ಷ ರುದ್ರೇಶ್ ಕೆ ಎನ್ , ಕಾರ್ಯದರ್ಶಿ ಬಿ.ಸಿ ರುದ್ರಮುನಿ ಮಾನವ ಹಕ್ಕುಗಳ ರಕ್ಷಣ ಆಯೋಗ ರಾಜ್ಯಾಧ್ಯಕ್ಷ ಬಿ.ಎಂ.ಚಿಕ್ಕಣ್ಣ , ಮಹಮ್ಮದ್ ಸಲೀಂ ಅಹಮ್ಮದ್ ಮುಖ್ಯೋಪಾಧ್ಯಯರು, ಸಿಬ್ಬಂದಿ ವರ್ಗ ,ಮಕ್ಕಳು, ಪೋಷಕರು ಹಾಜರಿದ್ದರು.

ಫೋಟೋ ಕ್ಯಾಪ್ಷನ್.. ಬಿಎನ್‌ಆರ್‌ ಪಬ್ಲಿಕ್‌ ಶಾಲೆ, ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಫೋಟೋ 2:ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ.ಎಸ್‌.ಮುನಿರಾಜು ಅವರನ್ನು ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ