ಪಠ್ಯಪುಸ್ತಕದ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ, ಕಲಾಸಕ್ತಿ ಹಾಗೂ ವೈಯಕ್ತಿಕ ಸಾಮರ್ಥ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಣದ ಪ್ರಮುಖ ಉದ್ದೇಶವಾಗಿದೆ. ನಗರದ ಸಂತ ಮೇರಿ ಆಂಗ್ಲ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ವಿವಿಧ ಕೌಶಲ್ಯಗಳನ್ನು ಹೊರತರುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳು ಯಾವುದೇ ಭಯ ಅಥವಾ ಸಂಕೋಚವಿಲ್ಲದೆ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಪಠ್ಯಪುಸ್ತಕದ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ, ಕಲಾಸಕ್ತಿ ಹಾಗೂ ವೈಯಕ್ತಿಕ ಸಾಮರ್ಥ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಣದ ಪ್ರಮುಖ ಉದ್ದೇಶವಾಗಿದೆ.ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದ್ದು, ಇಲ್ಲಿ ಗುರುತಿಸಿಕೊಳ್ಳುವ ಮಕ್ಕಳು ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆ ಮಾಡಲು ಅವಕಾಶವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ತಿಳಿಸಿದರು. ನಗರದ ಸಂತ ಮೇರಿ ಆಂಗ್ಲ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ವಿವಿಧ ಕೌಶಲ್ಯಗಳನ್ನು ಹೊರತರುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳು ಯಾವುದೇ ಭಯ ಅಥವಾ ಸಂಕೋಚವಿಲ್ಲದೆ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲೂ ಉತ್ತಮ ಸಾಧನೆ ಮಾಡುವಂತೆ ಶಿಕ್ಷಕರು ವಿಶೇಷ ತರಗತಿಗಳ ಮೂಲಕ ಸಿದ್ಧತೆ ನಡೆಸುತ್ತಿದ್ದಾರೆ. ಈ ಪ್ರಯತ್ನಗಳಿಗೆ ಪೋಷಕರು ಸಹ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಬೆಳೆಸಲು ಸೂಕ್ತ ಅವಕಾಶ ಕಲ್ಪಿಸುವುದು ಅಗತ್ಯ. ಪ್ರತಿಭಾ ಕಾರಂಜಿ ಅಂತಹ ಅವಕಾಶವನ್ನು ಒದಗಿಸುತ್ತಿದ್ದು, ಸ್ಪರ್ಧೆಗಳ ಆಯ್ಕೆಯಲ್ಲಿ ತೀರ್ಪುಗಾರರು ನಿಷ್ಪಕ್ಷಪಾತವಾಗಿ ಪ್ರತಿಭೆಯನ್ನು ಗುರುತಿಸಬೇಕು ಎಂದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಮಾತನಾಡಿ, ಸ್ಪರ್ಧೆಯಲ್ಲಿ ಗೆಲುವು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸಬೇಕು. ರಾಜ್ಯಮಟ್ಟದವರೆಗೂ ಪ್ರತಿಭೆ ಪ್ರದರ್ಶಿಸಲು ಅವಕಾಶವಿರುವುದರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಭಾಗವಹಿಸಬೇಕು ಎಂದು ಹುರಿದುಂಬಿಸಿದರು.
ತಾಲೂಕು ಶಿಕ್ಷಣ ಸಲಹಾ ಸಮಿತಿ ಸದಸ್ಯ ದೇವರಾಜ್ ಮಾತನಾಡಿದರು.ಕಾರ್ಯಕ್ರಮದಲ್ಲಿ ಸಂತ ಮೇರಿ ಶಾಲೆಯ ಮುಖ್ಯಶಿಕ್ಷಕಿ ಹಾಗೂ ಶಿಕ್ಷಕ ವೃಂದ, ಹಾಸನ ಡಯಟ್ ಉಪನ್ಯಾಸಕಿ ತ್ರಿವೇಣಿಬಾಯಿ, ಬಿಆರ್‌ಪಿ ಪುಷ್ಪಲತಾ, ಸಿಆರ್‌ಪಿ ವಿಷ್ಣುವರ್ಧನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.---------
ಫೋಟೋ
ಸಂತ ಮೇರಿ ಆಂಗ್ಲ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.